ಪಾವಗಡ | ಆಂಬುಲೆನ್ಸ್ ಸಿಗದೆ ವೃದ್ದನ ಮೃತದೇಹವನ್ನು ಬೈಕ್‌ನಲ್ಲಿಯೇ ಕೊಂಡೊಯ್ದ ಮಕ್ಕಳು!

Update: 2024-09-18 17:10 IST
ಪಾವಗಡ | ಆಂಬುಲೆನ್ಸ್ ಸಿಗದೆ ವೃದ್ದನ ಮೃತದೇಹವನ್ನು ಬೈಕ್‌ನಲ್ಲಿಯೇ ಕೊಂಡೊಯ್ದ ಮಕ್ಕಳು!

ಮೃತದೇಹವನ್ನು ಬೈಕ್‌ನಲ್ಲಿಯೇ ಕೊಂಡೊಯ್ದ ಮಕ್ಕಳು

  • whatsapp icon

ಪಾವಗಡ : ಮೃತದೇಹ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧನ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲೇ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಘಟನೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ ಹೊನ್ನೂರಪ್ಪ(80) ಎಂಬ ವೃದ್ದ ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರ ಮೃತಪಟ್ಟಿದ್ದರು.

ಮೃತಪಟ್ಟಿರುವ ಹೊನ್ನೂರಪ್ಪ ಅವರ ಮೃತದೇಹ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ದ್ವಿಚಕ್ರ ವಾಹನದಲ್ಲಿಯೇ ಹೊನ್ನೂರಪ್ಪ ಅವರ ಹಿರಿಯ ಪುತ್ರ ಚಂದ್ರಣ್ಣ ಮತ್ತು ಕಿರಿಯ ಪುತ್ರ ಗೋಪಾಲಪ್ಪ ತಮ್ಮೂರಿಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News