ತುಮಕೂರು | ಮಾಜಿ ಶಾಸಕ ಆರ್.ನಾರಾಯಣ ನಿಧನ
Update: 2024-12-12 17:48 GMT
ತುಮಕೂರು: ಹಿರಿಯ ಕಾಂಗ್ರೆಸ್ ಮುಖಂಡ,ಮಾಜಿ ಶಾಸಕ ಹಾಗೂ ಗೃಹ ಮಂಡಳಿ ಮಾಜಿ ಅಧ್ಯಕ್ಷ ಆರ್.ನಾರಾಯಣ ಇಂದು ವಿಧಿವಶರಾಗಿದ್ದಾರೆ.ಅವರಿಗೆ 82ವರ್ಷ ವಯಸ್ಸಾಗಿತ್ತು.
ಮಾಜಿ ಶಾಸಕ ನಾರಾಯಣ್ ಅವರು ವಯೋಸಹಜ ಕಾಯಿಲೆಗೆ ತುತ್ತಾಗಿ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ತುಮಕೂರು ತಾಲೂಕು ಬೆಳ್ಳಾವಿ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಶಾಸಕರಾಗಿದ್ದ ಆರ್. ನಾರಾಯಣ್ ಅವರು ಯೂತ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಲ್ಲಿ ಕಾರ್ಯನಿರ್ವಹಿಸಿದ್ದರು.