ತುಮಕೂರು | ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

Update: 2024-09-26 11:54 GMT

ಸಾಂದರ್ಭಿಕ ಚಿತ್ರ

ತುಮಕೂರು : ತುಮಕೂರಿನ ‌ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಧುಗಿರಿ ಪಟ್ಟಣದ ನಿವಾಸಿ ಹಸೀನಾ (25) ಹಾಗೂ ಅವರ ಮಕ್ಕಳಾದ ಅಲ್ಪಿಯಾ ಕೊನೆನ್ (3) ಅಫಿಯ ಕೊನೆನ್(8) ಮೃತರು ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಧುಗಿರಿ ಪಟ್ಟಣದಲ್ಲಿ ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದ ಹಸೀನಾ ತಾಜ್ ಗುರುವಾರ ಮಧುಗಿರಿ ಬಳಿಯಿರುವ ಸಿದ್ದಾಪುರ ಕೆರೆಗೆ ಬಂದು ತನ್ನ ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News