ತಿಪಟೂರು | ಮಗಳ ಮೇಲೆಯೇ ಅತ್ಯಾಚಾರವೆಸಗಿದ ವಲಸೆ ಕಾರ್ಮಿಕ ; ಪೊಕ್ಸೊ ಪ್ರಕರಣ ದಾಖಲು

Update: 2024-09-04 12:36 GMT

ಸಾಂದರ್ಭಿಕ ಚಿತ್ರ

ತಿಪಟೂರು : ತಂದೆಯೊಬ್ಬ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಕಾಮುಕ ತಂದೆಯ ಲೈಂಗಿಕ ದೌರ್ಜನ್ಯದಿಂದಾಗಿ 14 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದು ಬಂದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುಷ್ಕೃತ್ಯ ನಡೆದಿದೆ ಎನ್ನಲಾಗಿದ್ದು, ಆರೋಪಿಯ ಕುಟುಂಬ ಎಂಟು ತಿಂಗಳ ಹಿಂದೆ ಕೂಲಿ ಕೆಲಸಕ್ಕಾಗಿ ಹೊರ ರಾಜ್ಯದಿಂದ ಹೊನ್ನವಳ್ಳಿಗೆ ಬಂದು ನೆಲೆಸಿತ್ತು.

ಇತ್ತೀಚೆಗೆ ಬಾಲಕಿ ಪದೇ-ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಳು. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷೆ ವೇಳೆ ಆಕೆ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ. ತನ್ನ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದು, ಕಾಮುಕ ತಂದೆಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News