ತುಮಕೂರು: ಶಾರ್ಟ್ ಸರ್ಕ್ಯೂಟ್​ ನಿಂದ ಹಾಸ್ಟೆಲ್​ಗೆ ಬೆಂಕಿ; ಆರು ವಿದ್ಯಾರ್ಥಿನಿಯರು ಅಸ್ವಸ್ಥ

Update: 2024-06-08 04:57 GMT

ತುಮಕೂರು: ಶಾರ್ಟ್ ಸರ್ಕ್ಯೂಟ್​ ನಿಂದ ಹಾಸ್ಟೆಲ್​ಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆಯಿಂದಾಗಿ ಆರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

ತುಮಕೂರಿನ ಬಿಹೆಚ್ ರಸ್ತೆಯಲ್ಲಿರುವ ಜಿಲ್ಲಾ ಪಂಚಾಯಿತಿ ಆವರಣಕ್ಕೆ ಹೊಂದಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಹಾಸ್ಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್​ ಸರ್ಕ್ಯೂಟ್ ಆಗುತ್ತಲೇ ಹಾಸ್ಟೆಲ್​ನಲ್ಲಿದ್ದ 250ಕ್ಕೂ ಹೆಚ್ಚು ಹೆಣ್ಣು ಮಕ್ಕಳು ಹಾಸ್ಟೆಲ್ ನಿಂದ ಹೊರ ಓಡಿ ಬಂದಿದ್ದಾರೆ. ಆದರೆ  ಹೊಗೆಯಿಂದ ಅಸ್ವಸ್ಥರಾದ  ಆರು ಮಂದಿಯನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಾಸ್ಟೆಲ್​ನಲ್ಲಿ​ ಶಾರ್ಟ್​ ಸರ್ಕ್ಯೂಟ್ ಆಗುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ, ಸಮಾಜ ಕಲ್ಯಾಣ ಇಲಾಖೆಯ ಜೆ.ಡಿ‌.ಕೃಷ್ಣಪ್ಪ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಮಕ್ಕಳಿಗೆ ಧೈರ್ಯ ತುಂಬಿದ್ದಾರೆ. 

 

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News