ತುಮಕೂರು: ಖಾಸಗಿ ಬಸ್ ಡಿವೈಡರ್‌ಗೆ ಢಿಕ್ಕಿ; ಮೂವರು ಮೃತ್ಯು

Update: 2024-12-02 05:18 GMT

PC: x.com/htTweets

ತುಮಕೂರು: ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸೊಂದು ರಸ್ತೆ ಪಕ್ಕದಲ್ಲಿರುವ ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಬೆಳಗ್ಗಿನ ಜಾವ 4.30ರ ವೇಳೆಗೆ ನಡೆದಿದೆ.

ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಬಸ್‌ನಲ್ಲಿದ್ದ ಪ್ರಯಾಣಿಸುತ್ತಿದ್ದ 29 ಜನರಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನೆಲ್ಲ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

 ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ಹಾಗೂ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News