ತುಮಕೂರು | ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ರೈತ ಮೃತ್ಯು

Update: 2024-08-16 12:45 GMT

ಸಾಂದರ್ಭಿಕ ಚಿತ್ರ

ತುಮಕೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವೊಂದು ಕಚ್ಚಿದ ಪರಿಣಾಮ ರೈತನೊಬ್ಬ ಮೃತಪಟ್ಟಿರುವ ಘಟನೆ ತಾಲ್ಲೂಕಿನ ರಂಗಯ್ಯನಪಾಳ್ಯದಲ್ಲಿ ನಡೆದಿದೆ.

ಮೃತ ರೈತನ್ನು ರಂಗಯ್ಯನಪಾಳ್ಯದ ನಿವಾಸಿ ಚಿಕ್ಕೀರಯ್ಯ (65) ಎಂದು ಗುರುತಿಸಲಾಗಿದೆ. ಚಿಕ್ಕೀರಯ್ಯ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿದೆ ಎನ್ನಲಾಗಿದ್ದು, ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆಕೊಡಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರೈತ ಚಿಕ್ಕೀರಯ್ಯ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News