ತುಮಕೂರು | ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

Update: 2024-02-10 12:18 GMT

ತುಮಕೂರು: ಕೆಲ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ನಡೆದಿದೆ.

ಹತ್ಯೆಯಾದ ವ್ಯಕ್ತಿಯನ್ನು ಮರಿಯಪ್ಪ ಎಂದು ಗುರುತಿಸಲಾಗಿದ್ದು, ಕುಣಿಗಲ್ ತಾಲ್ಲೂಕಿನ ಹೇರೂರು ಸಮೀಪ ಇರುವ ಕುಳ್ಳನಂಜಯ್ಯನಪಾಳ್ಯದಲ್ಲಿ ಶುಕ್ರವಾರ ರಾತ್ರಿ ರಸ್ತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಮರಿಯಪ್ಪ ಅವರನ್ನು ಅಡ್ಡಗಟ್ಟಿ ಮಾರಕಾಸ್ತ್ಗಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ದ್ವಿಚಕ್ರ ವಾಹನದಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ ಮರಿಯಪ್ಪ ಅವರನ್ನು ಜಮೀನಿನಲ್ಲಿ ಬಲಗೈಯನ್ನು ಕತ್ತರಿಸಿ ಹಾಕಿದ್ದಾರೆ. ಮರಿಯಪ್ಪನ ತಲೆಯನ್ನು ಜಜ್ಜಿ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದ್ದು, ಕೊಲೆಯಾದ ಮರಿಯಪ್ಪನಿ ಅತಿಥಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಡಿವೈಎಸ್.ಪಿ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News