ತುಮಕೂರು | ಮರವೇರಿ ಆತ್ಮಹತ್ಯೆಗೆ ಯತ್ನಿಸಿದ ಹೋಂ ಗಾರ್ಡ್: ರಕ್ಷಿಸಿದ ಪೊಲೀಸ್, ಅಗ್ನಿಶಾಮಕ ದಳ ಸಿಬ್ಬಂದಿ

Update: 2023-09-12 05:29 GMT

ತುಮಕೂರು, ಸೆ.12: ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹೋಂ ಗಾರ್ಡ್ ಸಿಬ್ಬಂದಿಯೊಬ್ಬರು ಆಲದಮರ ಏರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

ಕೊರಟಗೆರೆ ಮೂಲದ ಜಯಣ್ಣ ಎಂಬವರು ಆತ್ಮಹತ್ಯೆಗೆ ಯತ್ನಿಸಿದ ಹೋಂ ಗಾರ್ಡ್. ಅವರು ಬೆಳಗ್ಗೆ ತುಮಕೂರಿನ ಕ್ಯಾತ್ಸಂದ್ರ ಬಳಿ ಇರುವ ಗೃಹರಕ್ಷಕ ದಳದ ಕಚೇರಿಯ ಆವರಣದಲ್ಲಿರುವ ದೊಡ್ಡ ಆಲದಮರ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಲ್ಲದೆ ಕಚೇರಿಯ ಹಿರಿಯ ಅಧಿಕಾರಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಫೇಸ್ಬುಕ್ ಹಾಗೂ ವಾಟ್ಸ್ ಆ್ಯಪ್ ಮೂಲಕ ಸ್ನೇಹಿತರಿಗೆ ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಜಯಣ್ಣರನ್ನು ಮನವೊಲಿಸಿ ಮರದಿಂದ ಕೆಳಗಿಳಿಸಿ ಕರೆದೊಯ್ದಿದ್ದಾರೆ.

ಈ ಬಗ್ಗೆ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News