ತುಮಕೂರು | ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು

Update: 2023-09-10 09:42 GMT
ಸಾಂದರ್ಭಿಕ ಚಿತ್ರ

ತುಮಕೂರು, ಸೆ.10: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟೀಕೆರೆ ಹೋಬಳಿ ಕಂಟಲಗೆರೆ ಕೆರೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಗಂಟೇನಹಳ್ಳಿ ನಿವಾಸಿ ತಿಮ್ಮರಾಜು ಎಂಬವರ ಪುತ್ರ 8ನೇ ತರಗತಿ ವಿದ್ಯಾರ್ಥಿ ರಾಕೇಶ್(14) ಹಾಗೂ ಶಾಂತೇಷ್ ಎಂಬವರ ಪುತ್ರ, 10ನೇ ತರಗತಿ ವಿದ್ಯಾರ್ಥಿ ಧನುಷ್(16) ಮೃತಪಟ್ಟ ಬಾಲಕರು.

ಇವರಿಬ್ಬರು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕಂಟಲಗೆರೆ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಮೃತದೇಹಗಳನ್ನು ಕೆರೆಯಿಂದ ಮೇಲೆತ್ತಿದ್ದಾರೆ.

ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News