ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ : ಎಚ್.ಡಿ.ಕುಮಾರಸ್ವಾಮಿ
Update: 2024-04-14 07:33 GMT
ತುಮಕೂರು : "ಕಾಂಗ್ರೆಸ್ ಸರಕಾರದ ಉಚಿತ ಗ್ಯಾರಂಟಿಯಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದಅವರು," ಕಾಂಗ್ರೆಸ್ ಸರಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದರಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಈ ರೀತಿ ಉಚಿತ ಯೋಜನೆ ಕೊಟ್ಟರೆ ಹಳ್ಳಿಯ ತಾಯಂದಿರ ಬದುಕು ಏನಾಗಬೇಕು?. ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕಿದೆ. ಅವರಿಗೆ ಐದು ಉಚಿತ ಗ್ಯಾರಂಟಿ ಬಿಟ್ಟು ಬೇರೆ ಏನೂ ಇಲ್ಲ" ಎಂದು ಹೇಳಿದ್ದಾರೆ.
"ಯಾವ ಪತ್ರಿಕೆ ನೋಡಿದರೂ ಗ್ಯಾರಂಟಿಯ ಜಾಹೀರಾತು. ಸಿಎಂ ಮತ್ತು ಡಿಸಿಎಂ ಫೋಟೋಗಳನ್ನು ಹಾಕಿಕೊಂಡು, ಈಗಾಗಲೇ 300 ಕೋಟಿಯಷ್ಟು ಹಣವನ್ನು ಜಾಹೀರಾತಿಗಾಗಿ ಖರ್ಚು ಮಾಡಿದ್ದಾರೆ" ಎಂದು ಆರೋಪಿಸಿದರು.