ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
Update: 2023-11-30 18:26 GMT
ತುಮಕೂರು: ಹನ್ನೊಂದು ತಿಂಗಳ ಮಗು, 4 ವರ್ಷದ ಮಗನೊಂದಿಗೆ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ನಿಟ್ಟೂರಿ ತಾಲ್ಲೂಕಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ನಿಟ್ಟೂರಿನ ವಿಜಯಲಕ್ಷ್ಮಿ ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳ ಹಿಂದೆ ವಿಜಯಲಕ್ಷ್ಮೀ ಅವರ ಪತಿ ನವೀನ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು.ಪತಿ ಸಾವಿನಿಂದ ಕಂಗೆಟ್ಟಿದ್ದ ವಿಜಯಲಕ್ಷ್ಮೀ ಇಂದು ತನ್ನ ಹನ್ನೊಂದು ತಿಂಗಳ ಮಗು ಹಾಗೂ 4 ವರ್ಷದ ಮಗನೊಂದಿಗೆ ನಿಟ್ಟೂರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಬಿ. ಚಂದ್ರಶೇಖರ್ ಬಾಬು ಭೇಟಿ ನೀಡಿ ಸಂಬಂಧಿಕರಿಗೆ ಸಾಂತ್ವನ ಹೇಳಿದರು.
ಘಟನಾ ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಗೋಪಿನಾಥ್ ಹಾಗೂ ಸಬ್ ಇನ್ಸ್ ಪೆಕ್ಟರ್ ದೇವಿಕಾ ದೇವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.