ಉಡುಪಿ: ಜ.10ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
Update: 2025-01-09 15:03 GMT
ಉಡುಪಿ, ಜ.9: ಉಡುಪಿ ನಗರಸಭಾ ವ್ಯಾಪ್ತಿಯ ಕಿನ್ನಿಮೂಲ್ಕಿಯಲ್ಲಿ ನೀರಿನ ಕೊಳವೆಯ ದುರಸ್ಥಿ ಕಾಮಗಾರಿ ಹಿನ್ನೆಲೆಯಲ್ಲಿ ಜನವರಿ 10ರಂದು ಅಜ್ಜರಕಾಡು ಟ್ಯಾಂಕ್ ಮತ್ತು ಎಸ್.ಪಿ. ಟ್ಯಾಂಕ್‌ನಿಂದ ನೀರು ಬರುವಂತಹ ಪ್ರದೇಶಗಳಿಗೆ ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಈ ಪ್ರದೇಶಗಳ ಸಾರ್ವಜನಿಕರು ಕುಡಿಯುವ ನೀರನ್ನು ಸಂಗ್ರಹಿಸಿಟ್ಟುಕೊಂಡು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.