ಉಡುಪಿ: ಎ.10ರಂದು ಬಿಜೆಪಿಯಿಂದ ಜನಾಕ್ರೋಶ ಯಾತ್ರೆ

Update: 2025-04-09 22:22 IST
ಉಡುಪಿ: ಎ.10ರಂದು ಬಿಜೆಪಿಯಿಂದ ಜನಾಕ್ರೋಶ ಯಾತ್ರೆ
  • whatsapp icon

ಉಡುಪಿ, ಎ.9: ರಾಜ ಸರಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಯನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ನಾಳೆ ನಗರದಲ್ಲಿ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ಕಿಶೋರ್‌ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರತಿದಿನ ಜನತೆಗೆ ಬೆಲೆ ಏರಿಕೆಯ ಬಿಸಿಯನ್ನು ನೀಡುತ್ತಿದೆ. ಜೊತೆಗೆ ದಿನಕ್ಕೊಂದು ಭ್ರಷ್ಟಾಚಾರದ ಹಗರಣ ಹೊರಬೀಳುತ್ತಿದೆ ಎಂದವರು ಆರೋಪಿಸಿದರು.

ಶ್ರೀಕೃಷ್ಣ ಮಠದ ರಾಜಾಂಗಣದಿಂದ ಜನಾಕ್ರೋಶ ಯಾತ್ರೆ ಬೆಳಗ್ಗೆ 9:30ಕ್ಕೆ ಪ್ರಾರಂಭಗೊಳ್ಳಲಿದ್ದು, ಕಲ್ಸಂಕ ಜಂಕ್ಷನ್ ಮೂಲಕ ಜಿಲ್ಲಾ ಬಿಜೆಪಿ ಕಚೇರಿ ಎದುರು ಮುಕ್ತಾಯಗೊಳ್ಳಲಿದೆ. ಸಮೀಪದ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಮಂಡಲದಲ್ಲಿ ವಿಪಕ್ಷ ನಾಯಕರಾದ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ ಸಹಿತ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್‌ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಕೆ.ಉದಯಕುಮಾರ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು.

ರಾಜ್ಯ ಸರಕಾರ ಜನವಿರೋಧಿ: ಅಣ್ಣಾಮಲೈ

 ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಜನವಿರೋಧಿ ಯಾಗಿದೆ. ಅದಿಕಾರ ಉಳಿಸಿಕೊಳ್ಳಲು ಏನೆಲ್ಲಾ ತಂತ್ರ ಮಾಡುತಿದ್ದಾರೆ. ಇದರ ವಿರುದ್ಧವೇ ಬಿಜೆಪಿ ಜನಾಕ್ರೋಶ ಆಯ್ಕೆ ಮಾಡುತ್ತಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ತಮಿಳುನಾಡಿನ ಬಿಜೆಪಿ ರಾಜ್ಯಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗಿನಿಂದ ಈ ಸರಕಾರ ವನ್ನು ನಾನು ನೋಡುತಿ ದ್ದೇನೆ. ಇಲ್ಲಿ ಹಗರಣಗಳು ತುಂಬಿವೆ. ಸದ್ಯಕ್ಕೆ ಕರ್ನಾಟಕದಲ್ಲಿ ಚುನಾವಣೆ ಇಲ್ಲ. ಆದರೆ ಜನರ ಪ್ರೀತಿ ಯನ್ನು ಸರಕಾರ ಕಳೆದುಕೊಂಡಿದೆ ಎಂದು ಅಣ್ಣಾಮಲೈ ಹೇಳಿದರು.

ಜನರು ಪ್ರೀತಿಕೊಟ್ಟು ಬಿಜೆಪಿ ಜೊತೆ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ ಅವರು, ಕೇಂದ್ರ ಸರಕಾರ ಅನಿಲ ದರ ಏರಿಸಿರುವುದರ ಕುರಿತು ಪ್ರಶ್ನಿಸಿದಾಗ, ಈಗಿನ ಪರಿಸ್ಥಿತಿ ತಾತ್ಕಾಲಿಕವಾಗಿ ರುತ್ತದೆ ಎಂದು ಭಾವಿಸುತ್ತೇನೆ ಎಂದರು.

ಅಂತಾರಾಷ್ಟ್ರೀಯವಾಗಿ ಗ್ಯಾಸ್ ದರ ಎರಿಕೆಯಾಗಿದೆ. ಗ್ಯಾಸ್ ಹೊರದೇಶದಿಂದ ಬರಬೇಕು. ನಮ್ಮಲ್ಲಿ ಅದು ಉತ್ಪಾದನೆಯಾಗುತ್ತಿಲ್ಲ. ಇತ್ತೀಚಿನ ವರ್ಷಗಳಲ್ಲಿ ಅದರ ಬಳಕೆ ಜಾಸ್ತಿಯಾಗಿದೆ. ಒಂದು ಹಂತದ ಮೇಲೆ ಆಯಿಲ್ ಕಂಪೆನಿಗೆ ನಷ್ಚ ಭರಿಸಲು ಸಾದ್ಯವಾಗುವುದಿಲ್ಲ. ಹೀಗಾಗಿ ದರ ಏರಿಕೆ ಅನಿವಾರ್ಯ. ಆದರೆ ಜನರಿಗೆ ಹೊರೆಯಾಗದಂತೆ ಸರಕಾರ ನೋಡಿಕೊಳ್ಳುತ್ತದೆ ಎಂದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News