ಉದ್ಯಾವರ: 11 ಅಂಗನವಾಡಿಗಳಲ್ಲಿ ಕ್ರಿಸ್ಮಸ್ ಆಚರಣೆ

Update: 2024-12-24 13:26 GMT

ಉಡುಪಿ, ಡಿ.24: ಸೌಹಾರ್ದ ಸಮಿತಿ ಉದ್ಯಾವರದ ನೇತೃತ್ವದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 11 ಅಂಗನವಾಡಿಗಳಲ್ಲಿರುವ ಮಕ್ಕಳಿಗೆ ಕ್ರಿಸ್ಮಸ್ ಸಿಹಿ ವಿತರಿಸಿ, ಕ್ರಿಸ್ಮಸ್ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ವ.ಅನಿಲ್ ಡಿಸೋಜ ಕ್ರಿಸ್ಮಸ್ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಧರ್ಮಗುರು ವಂ.ಸ್ಟೀಫನ್ ರೋಡ್ರಿಗಸ್, ಹಲಿಮಾ ಸಾಬ್ಜು ಆಡಿಟೋರಿಯಂ ಟ್ರಸ್ಟಿ ಹಾಜಿ ಅಬ್ದುಲ್ ಜಲೀಲ್ ಸಾಹೇಬ್, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಿತಿನ್ ಸಾಲ್ಯಾನ್, ಉದ್ಯಾವರ ಗ್ರಾಪಂ ಉಪಾಧ್ಯಕ್ಷ ರಾಜೇಶ್ ಕುಂದರ್, ಪಂಚಾಯತ್ ಸದಸ್ಯರಾದ ರಿಯಾಜ್ ಪಳ್ಳಿ, ಆಶಾ ವಾಸು, ಆಬಿದ್ ಅಲಿ, ಶ್ರೀ ನಾರಾಯಣ ಗುರು ಯುವ ವೇದಿಕೆ ಗೌರವಾಧ್ಯಕ್ಷ ಸದಾಶಿವ ಆಮಿನ್, ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ವಿಲ್ಫ್ರೆಡ್ ಡಿಸೋಜ, ಉದ್ಯಾವರ ಫ್ರೆಂಡ್ಸ್ ಸರ್ಕಲ್ ಗೌರವಾಧ್ಯಕ್ಷ ನಾಗೇಶ್ ಕುಮಾರ್, ಶಿಕ್ಷಕಿಯರಾದ ಗೀತಾ, ಅಕ್ಷತಾ, ಅಂಗನವಾಡಿ ಕಾರ್ಯಕರ್ತೆಯರು, ಸೌಹಾರ್ದ ಸಮಿತಿ ಮತ್ತು ಕಥೋಲಿಕ್ ಸಭಾದ ಸದಸ್ಯರು ಉಪಸ್ಥಿತರಿದ್ದರು.

ಸೌಹಾರ್ದ ಸಮಿತಿ ಅಧ್ಯಕ್ಷ ರೊಯ್ಸ್ ಫೆರ್ನಾಂಡಿಸ್ ಸ್ವಾಗತಿಸಿದರು. ಕಾರ್ಯದರ್ಶಿ ಪ್ರತಾಪ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News