ಶೇಡಿಮನೆ: 13ನೇ ವರ್ಷದ ರಕ್ತದಾನ ಶಿಬಿರ

Update: 2024-11-08 12:36 GMT

ಕುಂದಾಪುರ : ಅರಸಮ್ಮಕಾನು ನವಶಕ್ತಿ ಯುವಕ ಮಂಡಲ, ಬೆಳ್ವೆ ವ್ಯವಸಾಯ ಸೇವಾ ಸಹಕಾರ ಸಂಘ, ಲಯನ್ಸ್ ಕ್ಲಬ್ ಆರ್ಡಿ, ಬೆಳ್ವೆ- ಗೋಳಿಯಂಗಡಿ ಲಿಯೋ ಕ್ಲಬ್ ಯುವಶಕ್ತಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಕ್ತನಿಧಿ ಕೇಂದ್ರ ಕುಂದಾಪುರ ಘಟಕದ ಸಂಯುಕ್ತ ಆಶ್ರಯದಲ್ಲಿ ದಿವಂಗತ ಸುಧಾಕರ ಪೂಜಾರಿ ಅವರ ಸ್ಮರಣಾರ್ಥವಾಗಿ 13ನೇ ವರ್ಷದ ರಕ್ತದಾನ ಶಿಬಿರ ಜರಗಿತು.

ಕಾರ್ಯಕ್ರಮವನ್ನು ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಉದ್ಘಾಟಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಕ್ತ ನಿಧಿ ಘಟಕ ಕುಂದಾಪುರ ಅಧ್ಯಕ್ಷ ಎಸ್.ಜಯಕರ ಶೆಟ್ಟಿ ಮಾತನಾಡಿದರು. ಅಧ್ಯಕ್ಷತೆಯನ್ನು ನವಶಕ್ತಿ ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ ಹೆಗ್ಡೆ ವಹಿಸಿದ್ದರು.

ಮಡಾಮಕ್ಕಿ ಗ್ರಾಪಂ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಲಯನ್ಸ್ ಕ್ಲಬ್ ಆರ್ಡಿ -ಬೆಳ್ವೆ, ಗೋಳಿಯಂಗಡಿ ಕೋಶಾಧಿಕಾರಿ ಬಿ.ಜಯಪ್ರಕಾಶ್ ಶೆಟ್ಟಿ, ಅರಸಮ್ಮಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶ್ರೀಕಾಂತ್ ಆಚಾರ್ಯ, ಯುವಕ ಮಂಡಲದ ಕಾರ್ಯದರ್ಶಿ ಅರುಣ್ ಶೆಟ್ಟಿ ಉಪಸ್ಥಿತರಿದ್ದರು.

ನವಶಕ್ತಿ ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ ಹೆಗ್ಡೆ ಸ್ವಾಗತಿಸಿದರು. ಯುವಕ ಮಂಡಲದ ಗೌರವ ಅಧ್ಯಕ್ಷ ಕೀರ್ತಿ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಕ್ತದಾನ ಶಿಬಿರದಲ್ಲಿ ಸುಮಾರು ೧೪೫ಕ್ಕೂ ಅಧಿಕ ಮಂದಿ ಭಾಗವಹಿಸಿದ್ದು 115 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News