ಜ. 13ರಿಂದ ಉಡುಪಿ ಜಿಲ್ಲಾ ಮಟ್ಟದ ಸಂಜೀವಿನಿ ವಸ್ತು ಪ್ರದರ್ಶನ
Update: 2025-01-10 16:18 GMT
ಉಡುಪಿ, ಜ.10: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜ. 13ರಿಂದ 15ರವರೆಗೆ ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ರಥಬೀದಿಯ ಭಂಡಾರಕೇರಿ ಮಠದ ಆವರಣ ದಲ್ಲಿ ಸಂಜೀವಿನಿ ಸ್ವಸಹಾಯ ಗುಂಪುಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದೆ.
ಈ ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ವಿವಿಧ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಬಟ್ಟೆ ಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಮಣ್ಣಿನ ಹಣತೆ, ಗೋಉತ್ಪನ್ನ, ಹೆಬ್ರಿ ಹನಿ ಇತ್ಯಾದಿ ಉತ್ಪನ್ನಗಳು ಲಭ್ಯವಿರುತ್ತವೆ.
ಸಾರ್ವಜನಿಕರು ಈ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹ ನೀಡುವಂತೆ ಉಡುಪಿ ಜಿಲ್ಲಾ ಪಂಚಾಯತ್‌ನ ಪ್ರಕಟಣೆ ತಿಳಿಸಿದೆ.