ಉಡುಪಿ: ಡಿ.21ರಂದು ಗ್ರಾಮ ಒನ್ ಸಮ್ಮಿಲನ

Update: 2024-12-19 14:31 GMT

ಉಡುಪಿ, ಡಿ.19: ಜಿಲ್ಲಾಡಳಿತ ಹಾಗೂ ಸೇವಾ ಸಿಂಧು ಗ್ರಾಮ ಒನ್ ಉಡುಪಿ ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳ ನಿರ್ವಾಹಕರ ಗ್ರಾಮ ಒನ್ ಸಮ್ಮಿಲನ ಕಾರ್ಯಕ್ರಮ ಡಿ.21 ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪ್ರತೀಕ್ ಬಾಯಲ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಬೆಂಗಳೂರು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ನಿರ್ದೇಶಕ ಮೊಹಮ್ಮದ್ ಹಾರಿಸ್ ಸುಮೈರ್, ಇಡಿಸಿಎಸ್ ನಿರ್ದೇಶನಾಲಯದ ಯೋಜನಾ ನಿರ್ದೇಶಕ ಮದನ್‌ಮೋಹನ್ ಸಿ, ಅಪರ ಜಿಲ್ಲಾಧಿಕಾರಿ ಹಾಗೂ ಗ್ರಾಮ ಒನ್ ಜಿಲ್ಲಾ ಸಮಿತಿಯ ಸದಸ್ಯ ಕಾರ್ಯದರ್ಶಿ ಮಮತಾ ದೇವಿ ಜಿ.ಎಸ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News