ಬ್ರಹ್ಮಾವರ: ಖಾಲಿ ಉಳಿದಿರುವ ಡಿಪ್ಲೊಮಾ ಕೃಷಿ ಕೋರ್ಸ್ ಸೀಟಿಗೆ ಅ.25ರಂದು ಮುಕ್ತ ಕೌನ್ಸಿಲಿಂಗ್

Update: 2024-10-18 13:27 GMT

ಬ್ರಹ್ಮಾವರ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಬ್ರಹ್ಮಾವರ ದ ಕೃಷಿ ಡಿಪ್ಲೊಮಾ ಕಾಲೇಜಿನಲ್ಲಿ 2024-25 ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‌ನಲ್ಲಿ ಭರ್ತಿಯಾಗದೆ ಖಾಲಿ ಉಳಿದಿರುವ ಸೀಟುಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಪ್ಲೊಮಾ ಕೃಷಿಯ ಪಾಠಗಳನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (ಒಟ್ಟು ೪ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು.

ಪ್ರವೇಶಕ್ಕೆ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸೆಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆ ಯಾಗಿ ಅಭ್ಯಸಿಸಿ ಕನಿಷ್ಟ ಶೇ.೪೫ ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-೧ಕ್ಕೆ ಶೇ.೪೦). ರೈತರ ಹಾಗೂ ಕೃಷಿಕಾರ್ಮಿಕರ ಮಕ್ಕಳಿಗೆ ಶೇ.೫೦ರಷ್ಟು ಸೀಟುಗಳನ್ನು ಮೀಸಲಿಡಲಾಗಿದೆ. ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ ಶಿವಮೊಗ್ಗದ ವೆಬ್‌ಸೈಟ್: www.uahs.edu.in-ನಲ್ಲಿ ಡೌನ್ ಲೋಡ್ ಮಾಡಬಹುದು.

ವೆಬ್‌ಸೈಟ್ ಮೂಲಕ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ ಮುಕ್ತ ಕೌನ್ಸಿಲಿಂಗ್ ದಿನ ವಾದ ಅ.25ರಂದು ತರಬೇಕು. ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ರೂ. 500 ಹಾಗೂ ಪ.ಜಾ./ಪ.ಪಂ./ಪ್ರವರ್ಗ-1ದವರಿಗೆ ರೂ. 250. ಡಿಡಿಯನ್ನು ರಾಷ್ಟ್ರೀಕೃತ ಬ್ಯಾಂಕ್‌ನಿಂದ ಕಂಟ್ರೋಲರ್, ಕೆಎಸ್‌ಎನ್‌ಯುಎಎಚ್‌ಎಸ್, ಶಿವಮೊಗ್ಗ-577412 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು 25-10-2024ರಂದು ಖುದ್ದಾಗಿ ಸಲ್ಲಿಸಬೇಕು.

ಮುಕ್ತ ಕೌನ್ಸಿಲಿಂಗ್ ಅ.25ರಂದು ಬೆಳಗ್ಗೆ 10:30ರಿಂದ ಶಿವಮೊಗ್ಗದ ನವಿಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಎಂಪಿ ಹಾಲ್‌ನಲ್ಲಿ ನಡೆಯಲಿದೆ. ಸರಕಾರದ ಆದೇಶದಂತೆ ಉಳಿದಿರುವ ಸೀಟುಗಳನ್ನು ಮುಕ್ತ ಕೌನ್ಸಿಲಿಂಗ್ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು 6,190ರೂ. ಪ್ರವೇಶ ಶುಲ್ಕವನ್ನು ನಗದಾಗಿ ಸ್ಥಳ ದಲ್ಲಿಯೇ ಕಡ್ಡಾಯವಾಗಿ ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳ ಪ್ರವೇಶ ಶುಲ್ಕ 2,610 ರೂ.

ಹೆಚ್ಚಿನ ವಿವರಗಳಿಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ಅಥವಾ ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ- 576213 ದೂರವಾಣಿ ಸಂಖ್ಯೆ: ಪ್ರಾಂಶುಪಾಲರು:9480838208, ಕಛೇರಿ: 9108241342, 9686405090, ಈಮೈಲ್: princi-brahmavar@uahs.edu.in, ವೆಬ್‌ಸೈಟ್: www.uahs.edu.in-ನ್ನು ಸಂಪರ್ಕಿಸುವಂತೆ ವಿವಿಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News