ಉಡುಪಿ: ಡಿ.25ರಂದು ಅಮಿತ್ ಶಾ ಪ್ರತಿಕೃತಿ, ಮನುಸ್ಮತಿ ದಹನ
Update: 2024-12-24 15:34 GMT
ಉಡುಪಿ, ಡಿ.24: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ಹಾಗೂ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ವತಿಯಿಂದ ಡಿ.25ರಂದು ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಅವಮಾನ ಮಾಡಿರುವುದನ್ನು ವಿರೋಧಿಸಿ, ಅಮಿತ್ ಶಾ ರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿದೆ.
ಬುಧವಾರ ಬೆಳಗ್ಗೆ 10:30ಕ್ಕೆ ಸರಿಯಾಗಿ ಈ ಪ್ರತಿಭಟನೆ ನಡೆಯಲಿದ್ದು, ಉಡುಪಿ ಜಿಲ್ಲೆಯ ದಲಿತ ಸಂಘರ್ಷ ಸಮಿತಿಯ ಎಲ್ಲಾ ಕಾರ್ಯಕರ್ತರು ಮತ್ತು ಉಡುಪಿ ಜಿಲ್ಲೆಯ ಪ್ರಗತಿಪರ ಚಳುವಳಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ(ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ಮತ್ತು ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.