ಉಡುಪಿ: ಜ.26ರ ಗಣರಾಜ್ಯೋತ್ಸವ ಸಿದ್ಧತೆಗೆ ಪೂರ್ವಭಾವಿ ಸಭೆ

Update: 2025-01-10 16:12 GMT

ಉಡುಪಿ, ಜ.10: ಪ್ರತಿವರ್ಷದಂತೆ ಈ ಬಾರಿಯೂ ಜ.26ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯ ಕ್ರಮವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಭಾರತದ ಗಣರಾಜ್ಯೋತ್ಸವ ದಿನಾಚರಣೆ ದೇಶಪ್ರೇಮ, ದೇಶಭಕ್ತಿ ಹಾಗೂ ಭಾರತ ಸಂವಿಧಾನ ಆಚರಣೆಯ ಪ್ರತೀಕ ವಾಗಿದ್ದು, ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ಪಾಲಿಸಿ, ಲೋಪವಾಗ ದಂತೆ ಎಚ್ಚರ ವಹಿಸ ಬೇಕು ಎಂದರು.

ಜಿಲ್ಲಾ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜನವರಿ 26ರಂದು ಬೆಳಿಗ್ಗೆ 9:00ಕ್ಕೆ ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾ ಗುವುದು. ಶಿಷ್ಟಾಚಾರದಂತೆ ಗಣರಾಜ್ಯೋತ್ಸವ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳಿಗೆ, ಗಣ್ಯರಿಗೆ ವಿತರಿಸಬೇಕು ಎಂದರು.

ಕಾರ್ಯಕ್ರಮದ ವೇಳೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ಸ್ವಾತಂತ್ರ್ಯಹೋರಾಟಗಾರರು, ಗಣ್ಯರು, ಅಧಿಕಾರಿಗಳು, ಮಾಧ್ಯಮದವರಿಗೆ ಆಸೀನರಾಗಲು ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಗಣರಾಜ್ಯೋತ್ಸವದ ಪೆರೇಡ್‌ಗೆ ವ್ಯವಸ್ಥೆ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ರಾಷ್ಟ್ರ ಧ್ವಜಾ ರೋಹಣದ ನಂತರ ಶಾಲಾ ಮಕ್ಕಳಿಂದ ಹಾಗೂ ಪದಪೂರ್ವ ದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಎಎಸ್‌ಪಿ ಸಿದ್ಧಲಿಂಗಪ್ಪ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್, ಡಿಡಿಪಿಐ ಗಣಪತಿ ಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News