ಬಜೆಟ್ ತಯಾರಿ: ನ.30ರಂದು ಪೂರ್ವಭಾವಿ ಸಮಾಲೋಚನಾ ಸಭೆ
Update: 2024-11-29 16:31 GMT
ಉಡುಪಿ, ನ.29: ಕರ್ನಾಟಕ ಪುರಸಭಾ ಲೆಕ್ಕಪತ್ರ ಮತ್ತು ಬಜೆಟ್ ನಿಯಮ 2006ರನ್ವಯ ಉಡುಪಿ ನಗರಸಭೆಯ 2025-26 ನೇ ಸಾಲಿನ ಬಜೆಟ್ ತಯಾರಿಯ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಅವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯಗಳ ಕುರಿತು ಮೊದಲನೇ ಸುತ್ತಿನ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯು ನ.30ರಂದು ಅಪರಾಹ್ನ 3 ಗಂಟೆಗೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ, ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ, ಸಲಹೆ, ಸೂಚನೆಗಳನ್ನು ನೀಡುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.