ಉಡುಪಿ: ಡಿ.30ರಂದು ಬಜೆಟ್ ತಯಾರಿಗೆ ಪೂರ್ವಭಾವಿ ಸಭೆ
Update: 2024-12-26 14:37 GMT
ಉಡುಪಿ: ಉಡುಪಿ ನಗರಸಭೆಯ2025-26ನೇ ಸಾಲಿನ ಬಜೆಟ್ ತಯಾರಿ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳ ಬಹುದಾದ ಅವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯಕ್ಕಾಗಿ ಎರಡನೇ ಸುತ್ತಿನ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯು ಡಿಸೆಂಬರ್ 30ರಂದು ಅಪರಾಹ್ನ 3 ಗಂಟೆಗೆ ನಗರಸಭೆಯ ಸತ್ಯಮೂರ್ತಿ ಸಭಾಂಗಣ ದಲ್ಲಿ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ, ಸಲಹೆ-ಸೂಚನೆಗಳನ್ನು ನೀಡುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.