ದ್ವಿತೀಯ ಪಿಯುಸಿ ಪರೀಕ್ಷೆ: 35 ಮಂದಿ ಗೈರು
Update: 2025-03-18 21:36 IST

ಉಡುಪಿ, ಮಾ.18: ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ದ್ವಿತೀಯ ಪಿಯುಸಿಯ ನಾಲ್ಕು ವಿಷಯಗಳ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 35 ಮಂದಿ ಗೈರುಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ತಿಳಿಸಿದ್ದಾರೆ.
ಇಂದು ನಡೆದ ಜೀವಶಾಸ್ತ್ರ, ಸೋಷಿಯಾಲಜಿ, ಇಲೆಕ್ಟ್ರಾನಿಕ್ಸ್ ಹಾಗೂ ಕಂಪ್ಯೂಟರ್ ಸಾಯನ್ಸ್ ಪರೀಕ್ಷೆಗೆ ಒಟ್ಟು 11,455 ಮಂದಿ ನೊಂದಾಯಿಸಿ ಕೊಂಡಿದ್ದು ಅವರಲ್ಲಿ 11420 ಮಂದಿ ಇಂದು ಪರೀಕ್ಷೆ ಬರೆದಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.