ರೈತರೆಡೆಗೆ ನಮ್ಮ ನಡಿಗೆ 39ನೇ ಮಾಲಿಕೆ ಕಾರ್ಯಕ್ರಮ

Update: 2024-09-23 12:07 GMT

ಕೋಟ: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯವಾಗಿದ್ದು, ಮನೆ ಮನೆಗೆ ತೆರಳಿ ರೈತರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳಿಂದ ಮಾತ್ರ ಕೃಷಿ ಕಾಯಕದ ಕಡೆ ಹೆಚ್ಚು ಆಕರ್ಷಿತರಾಗಲು ಸಾಧ್ಯ. ಪ್ರಸ್ತುತ ಯುವ ಸಮೂಹ ಕೃಷಿ ಕಾರ್ಯದತ್ತ ಮುನ್ನಗ್ಗಬೇಕಿದೆ ಎಂದು ಕೋಟದ ಹಾಡಿಕೆರೆ ಶಾಂತಮೂರ್ತಿ ಶ್ರೀ ಶನೀಶ್ವರ ದೇಗುಲದ ಧರ್ಮದರ್ಶಿ ಬಾಸ್ಕರ್ ಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ, ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇವುಗಳ ಸಹಯೋಗದೊಂದಿಗೆ ರವಿವಾರ ಕೋಟದ ಹಾಡಿಕೆರೆ ಬೆಟ್ಟುವಿನಲ್ಲಿ ನಡೆದ ರೈತರೆಡೆಗೆ ನಮ್ಮ ನಡಿಗೆ 39ನೇ ಮಾಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು. ಕೃಷಿ ಸಾಧಕ ಪುರಸ್ಕೃತ ಚಂದ್ರ ಹಾಡಿಕೆರೆ ದಂಪತಿಯನ್ನು ರೈತ ಪುರಸ್ಕಾರ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕೋಟ ಗ್ರಾಪಂ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯ ಅಜಿತ್ ದೇವಾಡಿಗ, ಉದ್ಯಮಿ ಹರೀಶ್ ದೇವಾಡಿಗ, ರೈತ ಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾವ್ ಶೆಟ್ಟಿ, ಕಾರ್ಕಡ ಗೆಳೆಯರ ಬಳಗ ಸದಸ್ಯ ಶೇಖರ್ ಕಾರ್ಕಡ, ವಿಪ್ರ ಮಹಿಳಾ ವಲಯ ಅಧ್ಯಕ್ಷೆ ವನೀತಾ ಮಂಜುನಾಥ್ ಉಪಾಧ್ಯಾ, ಪಂಚವರ್ಣ ಸಂಸ್ಥೆಯ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಉಪಸ್ಥಿತರಿದ್ದರು.

ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಸಂಚಾಲಕಿ ಸುಜಾತ ಬಾಯರಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಪರಸ್ಕಾರ ಪತ್ರವಮನ್ನು ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ವಾಚಿಸಿದರು. ಶಿಕ್ಷಕ ಸಂತೋಷ್ ಕುಮಾರ್ ಕೋಟ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News