ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಅಸರ್ಮಪಕ ನಿರ್ವಹಣೆ ವಿರುದ್ಧ ಪ್ರತಿಭಟನೆ
ಕೋಟ, ನ.28: ಕುಂದಾಪುರದಿಂದ ಹೆಜಮಾಡಿವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ಅಸರ್ಮಪಕ ನಿರ್ವಹಣೆ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಗುರುವಾರ ಚಿತ್ರಪಾಡಿ ಮಾಡಿಗುಡಿ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮರಣ ಡೋಲು ಬಾರಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಹೆದ್ದಾರಿ ನಿರ್ವಹಣೆಗೈಯುವ ಕೆ.ಕೆ.ಆರ್ ಕಂಪೆನಿ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಅಣಕು ಶವಗಳನ್ನು ಜೀವನ್‌ಮಿತ್ರ ಅಂಬ್ಯುಲೆನ್ಸ್‌ನಲ್ಲಿ ತಂದು ಶಾಸ್ತ್ರೋತ್ತರವಾಗಿ ಕ್ರಮಗಳನ್ನು ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು. ಇದೇ ವೇಳೆ ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
ರಸ್ತೆ ಹೊಂಡಗುಂಡಿಗಳಿಗೆ ಮುಕ್ತಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಸರಿಪಡಿಸಬೇಕು. ಇಲ್ಲವಾದಲ್ಲಿ ಮುಂದಿನ ಹೋರಾಟ ತೀವ್ರಗೊಳಿಸಲಾಗುವುದು. ಟೋಲ್ ಪ್ಲಾಜಾದಲ್ಲಿ ಟೋಲ್ ನೀಡದೆ ಸಂಚರಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿಯ ಮಾಜಿ ಅಧ್ಯಕ್ಷ ಪ್ರತಾಪ್ ಶೆಟ್ಟಿ ಎಚ್ಚರಿಕೆ ನೀಡಿದರು.
ಸಾಕಷ್ಟು ಸಾವು ನೋವು: ಸಭೆಯನ್ನುದ್ದೇಶಿಸಿ ಹೆದ್ದಾರಿ ಜಾಗೃತಿ ಸಮಿತಿ ಅಧ್ಯಕ್ಷ ಶ್ಯಾಮಸುಂದರ್ ನಾಯರಿ, ಕಳೆದ ಸಾಕಷ್ಟು ವರ್ಷಗಳಿಂದ ಸ್ಥಳೀಯರಿಗೆ ಟೋಲ್ ವಿನಾಯಿತಿ ಸೇರಿದಂತೆ ಹೆದ್ದಾರಿ ಅಸರ್ಪಕ ಕಾಮಗಾರಿಯ ವಿರುದ್ಧ ಪ್ರತಿಭಟಿಸುತ್ತ ಬಂದಿದ್ದೇವೆ. ಆದರೆ ಈ ಹಿಂದೆ ಇದ್ದ ನವಯುಗ ಕಂಪನಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಕೂಡಾ ಮಾಡಿದೆ. ಆದರೆ ಇತ್ತೀಚಿಗೆ ಹೆದ್ದಾರಿ ನಿರ್ವಹಣೆ ಗುತ್ತಿಗೆ ಪಡೆದ ಕೆ.ಕೆ.ಆರ್ ಕಂಪನಿ ರಸ್ತೆ ನಿರ್ವಣೆಯಲ್ಲಿ ಎಡೆವಿದೆ. ಅಲ್ಲದೆ ಉಡಾಫೆ ಉತ್ತರ ನೀಡುತ್ತಿದ್ದು ರಸ್ತೆ ಹೊಂಡಗುಂಡಿಗಳಿಗೆ ಮುಕ್ತಿ ಗಾಣಿಸದೆ ಸಾಕಷ್ಟು ಸಾವು ನೋವು ಸಂಭವಿಸು ತ್ತಿದೆ ಎಂದು ದೂರಿದರು.
ಸರ್ವಿಸ್ ರಸ್ತಗಳಿಲ್ಲ, ಸಮರ್ಪಕ ದಾರಿದೀಪಗಳು, ಚರಂಡಿಗಳಿಲ್ಲ ಇಷ್ಟಲ್ಲದೆ ಸಾಕಷ್ಟು ಸಮಸ್ಯೆಗಳಿದ್ದರೂ ನಿರ್ಲಕ್ಷ್ಯೀಣಿಯ ಧೋರಣೆ ಅನುಸರಿಸುತ್ತಿದೆ. ಈ ಹಿನ್ನಲ್ಲೆಯಲ್ಲಿ ಇದೇ ಕೊನೆಯಂಬಂತೆ ಪ್ರತಿಭಟಿಸುತ್ತಿದ್ದೇವೆ. ಮುಂದೆ ಇದೇ ನಿರ್ಲಕ್ಷ್ಯೀಯ ಧೋರಣೆ ಅನುಸರಿಸಿದರೆ ಟೋಲ್‌ಗೆ ಸಂಚಾಕಾರ ತಂದ್ದೋಡ್ಡಲಿ ದ್ದೇವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ಅವ್ಯವಸ್ಥೆ ಗೊತ್ತಿದ್ದು ಜಿಲ್ಲಾಧಿಕಾರಿ ಕೈಕಟ್ಟಿ ಕುಳಿತಿದ್ದಾರೆ. ಜಿಲ್ಲೆಯ ಜನಸಾಮಾನ್ಯರ ಸಮಸ್ಯೆಯ ಬಗ್ಗೆ ನ್ಯಾಯ ಕೊಡಿಸ ಬೇಕಾದ ಅಧಿಕಾರಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹಾಗಾದರೆ ಈ ಸಮಸ್ಯೆಗಳಿಗೆ ಉತ್ತರಿಸುವವರು ಯಾರು? ಮುಂದೆ ಕೂಡಾ ಇದೇ ರೀತಿ ಮುಂದುವರೆದರೆ ಟೋಲ್ ಈ ಭಾಗದಿಂದ ನೆಲಸಮ ಮಾಡಲಿದ್ದೇವೆ ಎಂದು ಹೋರಾಟ ಸಮಿತಿ ದಿನೇಶ್ ಗಾಣಿಗ ಉಡುಪಿ ಜಿಲ್ಲಾಧಿಕಾರಿ ಹಾಗೂ ಪೋಲಿಸ್ ಅಧಿಕಾರಿಗಳಿಗೆ ಎಚ್ಚರಿಸಿದರು.
ತಹಶೀಲ್ದಾರ್‌ಗೆ ಮನವಿ: ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಶ್ಯಾಮಸುಂದರ್ ನಾಯರಿ ಮನವಿ ಪತ್ರವನ್ನು ಬ್ರಹ್ಮಾ ವರದ ತಹಶಿಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ ಹಸ್ತಾಂತರಿಸಿದರು. ಈ ವೇಳೆ ತಹಶೀಲ್ದಾರ್ ಮಾಹಿತಿ ನೀಡಿ ಒಂದು ತಿಂಗಳೊಳಗೆ ಹೆಚ್ಚಿನ ಸಮಸ್ಯೆಗಳಿಗೆ ಮುಕ್ತಿಗಾಣಿಸಲು ಕಂಪನಿಯ ಅಧಿಕಾರಿಗಳಿಗೆ ಸೂಚಿಸಿದಲ್ಲದೆ ಪತ್ರದ ಮೂಲಕ ಲಿಖಿತವಾಗಿ ನೀಡುತ್ತೇನೆ ಎಂದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಐರೋಡಿ ವಿಠ್ಠಲ ಪೂಜಾರಿ, ಪ್ರಶಾಂತ್ ಶೆಟ್ಟಿ, ಜಯ ಕರ್ನಾಟಕ ಸಂಘಟನೆಯ ಸತೀಶ್ ಪೂಜಾರಿ, ರಾಜೇಶ್ ಕಾವೇರಿ, ಭೋಜ ಪೂಜಾರಿ, ಋಶಿರಾಜ್ ಸಾಸ್ತಾನ, ಚಂದ್ರಶೇಖರ್ ಮೆಂಡನ್, ನಾಗರಾಜ್ ಗಾಣಿಗ, ರಾಜೇಂದ್ರ ಸುವರ್ಣ, ಮಹಾಬಲ ಪೂಜಾರಿ, ರಾಜೇಶ್ ಸಾಸ್ತಾನ, ಅಚ್ಯುತ ಪೂಜಾರಿ, ಸುಲತಾ ಹೆಗ್ಡೆ, ಗಣೇಶ್ ಪೂಜಾರಿ, ಲೀಲಾವತಿ ಗಂಗಾಧರ್, ಫಾ.ರೆವರೆಂಡ್ ಡಿಸಿಲ್ವ ಮೊದಲಾದವರು ಉಪಸ್ಥಿತರಿದ್ದರು.
ಕೆ.ಕೆ ಆರ್ ಕಂಪನಿಯ ಉಸ್ತುವಾರಿ ತಿಮ್ಮಯ್ಯ, ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್, ಠಾಣಾಧಿಕಾರಿ ತೇಜಸ್ವಿ, ಕೋಟ ಠಾಣಾಧಿಕಾರಿ ರಾಘವೇಂದ್ರ ಮೊದಲಾದವರು ಹಾಜರಿದ್ದರು. ಮಾಜಿ ಅಧ್ಯಕ್ಷ ಪ್ರತಾಪ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಅಲ್ವಿನ್ ಅಂದ್ರಾದೆ ಕಾರ್ಯಕ್ರಮ ನಿರ್ವಹಿಸಿದರು.