ನ. 7ರಂದು ತಾಲೂಕು ಮಟ್ಟದ ಪಿಂಚಣಿ ಅದಾಲತ್
Update: 2024-11-05 14:59 GMT
ಉಡುಪಿ, ನ.5: ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ಉದ್ದೇಶ ದಿಂದ ಕುಂದಾಪುರ ಉಪವಿಭಾಗದ ಸಹಾಯಕ ಕಮೀಷನರ್ ಕೆ.ಮಹೇಶ್ ಚಂದ್ರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪಿಂಚಣಿ ಅದಾಲತ್ ನವೆಂಬರ್ 7ರಂದು ಅಪರಾಹ್ನ 4 ಗಂಟೆಗೆ ಬನ್ನಂಜೆಯಲ್ಲಿರುವ ತಾಲೂಕು ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆಯಲಿದೆ.
ಪಿಂಚಣಿ ಅದಾಲತ್‌ನಲ್ಲಿ ಉಡುಪಿ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟ ಪಿಂಚಣಿ ಸೌಲಭ್ಯ ಪಡೆಯಲಿಚ್ಚಿಸುವ ವರು, ಈಗಾಗಲೇ ಅರ್ಜಿ ಸಲ್ಲಿಸಿ ಕೋರಿಕೆ ತಿರಸ್ಕೃತಗೊಂಡಿರುವವರು, ಈಗಾಗಲೇ ಮಂಜೂರಾಗಿ ಹಣ ಪಾವತಿಯಾಗದೇ ಇರುವವರು ಹಾಗೂ ಪಿಂಚಣಿಗೆ ಸಂಬಂಧಿಸಿದ ಇನ್ನಿತರ ದೂರುಗಳಿದ್ದಲ್ಲಿ ಈ ಅದಾಲತ್‌ಗೆ ಹಾಜರಾಗಿ ಪರಿಹಾರ ಪಡೆದುಕೊಳ್ಳಬಹುದು ಎಂದು ಉಡುಪಿ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.