ಉಡುಪಿ: ಅ.9ರಂದು ಮಿನಿ ಉದ್ಯೋಗ ಮೇಳ

Update: 2024-10-05 14:58 GMT

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್ 9ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936ನ್ನು ಸಂಪರ್ಕಿ ಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News