ನ.10: ಮುಡಬಿದ್ರೆಯಲ್ಲಿ ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-2024
ಉಡುಪಿ, ನ.6: ಕರಾವಳಿ ಮೂಲದ ಮರಾಟಿ ಸಮುದಾಯದ ರಾಜ್ಯಮಟ್ಟದ ಸಮಾವೇಶ ನ. 10ರಂದು ಮೂಡಬಿದರೆ ವಿದ್ಯಾನಗರಿಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣ ನಡೆಯಲಿದೆ ಎಂದು ಸಮಾವೇಶ ಸಮಿತಿಯ ಗೌರವಾಧ್ಯಕ್ಷ ಡಾ.ಕೆ.ಸುಂದರ ನಾಯ್ಕ್ ಅವರು ತಿಳಿಸಿದ್ದಾರೆ.
ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರಾವಳಿಯಲ್ಲಿ ಕೊರಗರು ಹಾಗೂ ಮಲೆಕುಡಿಯ ರೊಂದಿಗೆ ಪರಿಶಿಷ್ಟ ಪಂಗಡದಲ್ಲಿ ಸ್ಥಾನ ಪಡೆದಿರುವ ಮರಾಟಿ ಸಮುದಾಯದ ಸಮಗ್ರ ಬಲವರ್ಧನೆ ಹಾಗೂ ಪ್ರಗತಿಗಾಗಿ ಒಂದು ದಿನದ ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವಿವಿಧ ಕಾರಣಗಳಿಗಾಗಿ ಸುಮಾರು 400-500 ವರ್ಷಗಳ ಹಿಂದೆ ಮಹಾರಾಷ್ಟ್ರದಿಂದ ವಲಸೆ ಬಂದು ಉಡುಪಿ, ದಕ್ಷಿಣ ಕನ್ನಡ ಹಾಗೂ ಕೇರಳ ಕಾಸರಗೋಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ನೆಲೆಸಿರುವ ಮರಾಟಿ ಸಮುದಾಯ ಬಳಿಕ ಅಕ್ಕಪಕ್ಕದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ನೆಲೆ ಕಂಡುಕೊಂಡಿದೆ ಎಂದರು.
ಸದ್ಯ ಕರ್ನಾಟಕದಲ್ಲಿ ಸುಮಾರು 3ಲಕ್ಷದಷ್ಟು ಕರಾವಳಿ ಮೂಲದ ಮರಾಟಿಗರ ಜನಸಂಖ್ಯೆ ಇದೆ ಎಂದು ಅಂದಾಜಿಸಲಾ ಗಿದೆ. ಗುಡ್ಡಗಾಡುಗಳಲ್ಲಿ ವಾಸವಗಿರುವ ಈ ಸಮುದಾಯದ ಶೇ.60ರಿಂದ 70ರಷ್ಟು ಜನ ಈಗಲೂ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯವಾಗಿ ಹಿಂದುಳಿದಿ ರುವುದರೊಂದಿಗೆ ಅನೇಕ ಸಮಸ್ಯೆ ಹಾಗೂ ಸವಾಲುಗಳನ್ನು ಎದುರಿ ಸುತಿದ್ದಾರೆ ಎಂದು ಡಾ.ಸುಂದರ ನಾಯ್ಕ್ ತಿಳಿಸಿದರು.
ಸುಮಾರು 22 ವರ್ಷಗಳ ಬಳಿಕ ಈ ಸಮಾವೇಶ ನಡೆಯುತಿದ್ದು, ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ, ಕೆಲವು ನಿರ್ಣಯಗಳನ್ನು ತೆಗೆದುಕೊಂಡು ಬೇಡಿಕೆಗಳನ್ನು ಸರಕಾರದ ಮುಂದೆ ಇಡಲು ಉದ್ದೇಶಿಸಲಾಗಿದೆ. ಸಮಾವೇಶದಲ್ಲಿ 15ರಿಂದ 20ಸಾವಿರ ಮಂದಿ ಮರಾಟಿಗರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.
ಸಮಾವೇಶದಲ್ಲಿ ಮೂರು ಗೋಷ್ಠಿಗಳು, ಉಪನ್ಯಾಸ ಕಾರ್ಯಕ್ರಮ ಹಾಗೂ ಮರಾಟಿಗರ ಆಚಾರ-ವಿಚಾರ, ಸಂಸ್ಕೃತಿ, ಸಂಸ್ಕಾರಗಳನ್ನು ಪ್ರತಿಬಿಂಬಿ ಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಲ್ಲದೇ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕರನ್ನು ಸನ್ಮಾನಿಸುವ ಕಾರ್ಯಕ್ರಮವೂ ಇದೆ ಎಂದು ಡಾ.ನಾಯ್ಕ್ ವಿವರಿಸಿದರು.
ಸಮಾವೇಶವನ್ನು ನ.10ರಂದು ಬೆಳಗ್ಗೆ 10ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಲಿದ್ದಾರೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿಖಾದರ್ ಅತಿಥಿಗಳಾಗಿ ಉಪಸ್ಥಿತರಿರುವರು.‘ಗದ್ದಿಗೆ’ ಸ್ಮರಣ ಸಂಚಿಕೆ ಯನ್ನು ಮೂಡಬಿದರೆಯ ಡಾ.ಎಂ.ಮೋಹನ್ ಆಳ್ವ ಬಿಡುಗಡೆಗೊಳಿಸಲಿ ದ್ದಾರೆ. ಮರಾಟಿಗರ ಅಹವಾಲು, ಬೇಡಿಕೆಗಳ ನ್ನೊಳಗೊಂಡ ಮನವಿಯನ್ನು ಡಾ.ಸುಂದರ ನಾಯ್ಕ್ ಮುಖ್ಯಮಂತ್ರಿಗಳಿಗೆ ಅರ್ಪಿಸಲಿದ್ದಾರೆ. ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ.
ಸಮಾರೋಪ ಸಮಾರಂಭ ಸಂಜೆ 4 ಗಂಟೆಗೆ ನಡೆಯಲಿದ್ದು, ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಸಕರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸಮಾವೇಶದ ಅಧ್ಯಕ್ಷತೆಯನ್ನು ಸಮುದಾಯದ ಐಎಎಸ್ ಅಧಿಕಾರಿಯಾ ಗಿರುವ ಸದ್ಯ ಜಮ್ಮು-ಕಾಶ್ಮೀರ ಸರಕಾರದ ಪ್ರಧಾನ ಕಾರ್ಯದರ್ಶಿ ಗಳಾಗಿರುವ ಎಚ್.ರಾಜೇಶ್ ಪ್ರಸಾದ್ ವಹಿಸಲಿದ್ದಾರೆ. ಸಮಾಜದ ಎಲ್ಲಾ ಸಂಘಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿರುವರು ಎಂದರು.
ಉದ್ಯೋಗ ಮೇಳ: ಸಮಾವೇಶಕ್ಕೆ ಪೂರ್ವಭಾವಿಯಾಗಿ ನ.9ರಂದು ಕರ್ನಾಟಕ ಮರಾಟಿ ಸಂಘ ಬೆಂಗಳೂರು ಇದರ ಸಹಕಾರದೊಂದಿಗೆ ಮರಾಟಿ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದು, ಸುಮಾರು 1500 ಮಂದಿ ಇದರಲ್ಲಿ ಭಾಗವಹಿಸಲು ಹೆಸರು ನೊಂದಾಯಿಸಿಕೊಂಡಿದ್ದಾರೆ. 30ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಸಮಾವೇಶ ಸಮಿತಿಯ ಕಾರ್ಯಾಧ್ಯಕ್ಷ ರಾಮಚಂದ್ರ ಕೆಂಬಾರೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ನರಸಿಂಹ ನಾಯ್ಕ್, ವಾಸು ನಾಯ್ಕ್ ಹಾಗೂ ರಾಘವ ನಾಯ್ಕ್ ಉಪಸ್ಥಿತರಿದ್ದರು.