ಜ.11: ಉಡುಪಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ, ರೋಡ್ ಶೋ
Update: 2025-01-08 15:11 GMT
ಉಡುಪಿ: ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2025ರ ಅಂಗವಾಗಿ ಗ್ರಾಹಕರಲ್ಲಿ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿಜ್ಞಾನಿಗಳು, ಪ್ರಗತಿ ಪರ ರೈತರು ಮತ್ತು ಮಾರುಕಟ್ಟೆದಾರರ ಸಹಯೋಗದೊಂದಿಗೆ ಸಿರಿಧಾನ್ಯ ಹಬ್ಬ ಕಾರ್ಯಕ್ರಮವನ್ನು ಜ. 11ರ ಬೆಳಗ್ಗೆ 10 ಗಂಟೆಗೆ ಉಡುಪಿಯ ಕೃಷ್ಣ ಮಠದ ರಾಜಾಂಗಣ ಸಭಾಂಗಣದಲ್ಲಿ ಹಾಗೂ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವನ್ನು ಜನವರಿ 18ರಂದು ಸಂಜೆ 4.30ಕ್ಕೆ ಮಲ್ಪೆ ಕಡಲ ತೀರದಲ್ಲಿ ಆಯೋಜಿಸ ಲಾಗಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವವರು ನಿಯೋಜಿತ ಸ್ಥಳಗಳಲ್ಲಿ ನಿಗದಿತ ದಿನ ಹಾಗೂ ಸಮಯಕ್ಕೆ ಹಾಜರಿರುವಂತೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.