ಕಾಪು ಲೈಟ್‌ಹೌಸ್‌ನಲ್ಲಿ 1.40 ಕೋಟಿ ರೂ. ವೆಚ್ಚದ ಪ್ರವಾಸಿ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Update: 2024-02-28 13:57 GMT

ಕಾಪು: ಕಾಪು ಲೈಟ್‌ಹೌಸ್ ಪ್ರದೇಶದ ಸುತ್ತಮುತ್ತ ಸುಮಾರು 1.40 ಕೋಟಿ ರೂ.ವೆಚ್ಚದಲ್ಲಿ ಪ್ರವಾಸಿ ಸೌಲಭ್ಯಗಳನ್ನು ಒದಗಿಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಆಹಾರ ಸಂಸ್ಕರಣ ಉದ್ಯಮ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಕೇಂದ್ರ ಸರಕಾರದ ಬಂದರು, ನೌಕಾಯಾನ ಹಾಗೂ ಜಲಸಾರಿಗೆ ಇಲಾಖೆ, ಡೈರೆಕ್ಟರೇಟ್ ಜನರಲ್ ಆ್ ಲೈಟ್‌ಹೌಸ್ ಆ್ಯಂಡ್ ಲೈಟ್‌ಶಿಪ್ಸ್ ಇಲಾಖೆಯ ವತಿಯಿಂದ ಕಾಪು ದೀಪಸ್ತಂಭಗಳನ್ನು ಉಳಿಸಿಕೊಂಡು ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಳೀಯವಾಗಿ ಲೋಕಾರ್ಪಣೆಗೊಳಿಸಿ ಶೋಭಾ ಕರಂದ್ಲಾಜೆ ಮಾತನಾಡಿದರು.

ಈ ಯೋಜನೆಯಡಿ ದೇಶದಲ್ಲಿ ಒಟ್ಟು 75 ದೀಪಸ್ತಂಭಗಳ ಪ್ರದೇಶಗಳಲ್ಲಿ ಇಂಥ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ಇವುಗಳ ಉದ್ಘಾಟನೆಯನ್ನು ತಮಿಳುನಾಡಿನ ಟ್ಯುಟಿಕೋರಿನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ನೆರವೇರಿಸಿದರು. ಇದರ ನೇರಪ್ರಸಾರವನ್ನು ಕಾಪು ದೀಪಸ್ತಂಭದ ಆವರಣದಲ್ಲಿ ಆಯೋಜಿಸಲಾಗಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇದರಲ್ಲಿ ಭಾಗವಸಿ ಮಾತನಾಡುತ್ತಿದ್ದರು.

ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮಾಡಿದ ಕಾರ್ಯಕ್ರಮಗಳನ್ನು ಮೋದಿಯವರೇ ಉದ್ಘಾಟಿಸುತ್ತಿರುವುದು ಅವರ ಹೆಚ್ಚುಗಾರಿಕೆ. ದೇಶದಾದ್ಯಂತ 75 ಲೈಟ್‌ಹೌಸ್‌ಗಳನ್ನು ಪುನರುಜ್ಜೀವನಗೊಳಿಸಿದ್ದಾರೆ. ಈ ಮೂಲಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಸಿಗಲಿದೆ. ಕರಾವಳಿ ಭಾಗದ ಅಭಿವೃದ್ಧಿ ಕಾರ್ಯಗಳ ಕುರಿತು ಎಲ್ಲಾ ರಾಜ್ಯಗಳ ಸಂಸದರು ಮತ್ತು ಶಾಸಕರ ಸಭೆಯಲ್ಲಿ ರಾಜ್ಯದ ದೀಪಸ್ತಂಭಗಳ ಅಭಿವೃದ್ಧಿ, ಬ್ಲೂ ಫ್ಲ್ಯಾಗ್ ಬೀಚ್‌ಗೆ ಬೇಡಿಕೆ ಇಟ್ಟಿದ್ದೆವು. ಇದರಿಂದ ವಿದೇಶಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂದರು.

ಮಲ್ಪೆ ಬಂದರು ಅಭಿವೃದ್ಧಿ ಮತ್ತು ಹೂಳೆತ್ತಲು, ಹೆಜಮಾಡಿಗೆ 180 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ಬಂದರು ನಿರ್ಮಾಣ, ಹಂಗಾರ ಕಟ್ಟೆಯಲ್ಲಿ ಕಳೆದ ಬಾರಿ ಡ್ರೆಜ್ಜಿಂಗ್ ಆಗಿದ್ದು ಬಂದರು ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಈ ಅಭಿವೃದ್ಧಿಗೆ 70 ಕೋಟಿ ಹಣ ಇರಿಸಿದ್ದೇವೆ ಎಂದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಾಪು ಲೈಟ್‌ಹೌಸ್ 1908ರಲ್ಲಿ ನಿರ್ಮಾಣಗೊಂಡಿದೆ. ಇದನ್ನು ಉಳಿಸಿ ಬೆಳೆಸಬೇಕು ಎಂಬ ಆಶಯದೊಂದಿಗೆ ಕಾಪು ಲೈಟ್‌ಹೌಸ್‌ನ್ನು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಡಿಸಿ ಮಮತಾದೇವಿ, ಕೇಂದ್ರ ಬಂದರು, ಹಡಗು ಮತ್ತು ಜಲ ಸಾರಿಗೆ ಇಲಾಖೆಯ ಉಪ ನಿರ್ದೇಶಕ ಪ್ರಸಾದ್ ನಿಮಾರೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಹಾಗೂ ವಿವಿ‘ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News