ಅ.15: ಉಡುಪಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ

Update: 2024-10-14 14:06 GMT

ಉಡುಪಿ, ಅ.14: ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆ ಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ ನಾಳೆ ಅ.15 ಮಂಗಳವಾರ ಅಪರಾಹ್ನ 3:00 ಗಂಟೆಗೆ ಉಡುಪಿ ಅಂಬಾಗಿಲಿನಲ್ಲಿರುವ ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ.

ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್‌ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅಲ್ಲದೇ ಪಕ್ಷದ ಪ್ರಮುಖರು, ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಪಕ್ಷದ ವಿವಿಧ ಸ್ತರಗಳ ಪದಾಧಿಕಾರಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News