ನ.18ರಂದು ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ
Update: 2024-11-17 14:30 GMT
ಉಡುಪಿ, ನ.17: ಪರ್ಕಳ ಸಮೀಪದ ಪರೀಕದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಏಳನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ನ.18ರ ಸೋಮವಾರ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಭಾಗವಹಿಸಲಿದ್ದಾರೆ. ಇತರ ಗಣ್ಯ ವ್ಯಕ್ತಿಗಳ ಗೌರವ ಉಪಸ್ಥಿತಿಯೊಂದಿಗೆ ಬೆಳಗ್ಗೆ ಕಾರ್ಯಕ್ರಮ ನಡೆಯಲಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.