ಡಿ.19ರಂದು ಹಿರಿಯ ನಾಗರಿಕರಿಗೆ ಸನ್ಮಾನ
Update: 2024-12-17 14:46 GMT
ಉಡುಪಿ, ಡಿ.17: ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ವತಿಯಿಂದ 2023-24ನೇ ಸಾಲಿನಲ್ಲಿ 80 ವರ್ಷ ಪೂರೈಸಿದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಡಿ.19ರಂದು ಅಪರಾಹ್ನ 3:00ಗಂಟೆಗೆ ಅಜ್ಜರಕಾಡು ಪುರಭವನದ ಮಿನಿ ಹಾಲ್‌ನಲ್ಲಿ ನಡೆಯಲಿದೆ.
ಉಡುಪಿ ಹಿರಿಯ ನಾಗರಿಕ ಸಂಸ್ಥೆಯ ಅಧ್ಯಕ್ಷ ಪಿ.ನಾಗರಾಜ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಬಡಗುಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಬಿ.ಜಯಕರ ಸೆಟ್ಟಿ ಇಂದ್ರಾಳಿ ಉದ್ಘಾಟಿಸಲಿದ್ದಾರೆ. ಉಡುಪಿ ಟೀಚರ್ಸ್ ಬ್ಯಾಂಕಿನ ಅಧಯಕ್ಷ ಸಂತೋಷ ಕುಮಾರ್ ಶೆಟ್ಟಿ, ಉಡುಪಿ ರೆಡ್‌ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಉಡುಪಿ ಜಿಲ್ಲಾ ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಎಚ್.ವಿಶ್ವನಾಥ ಹೆಗ್ಡೆ ಹಾಗೂ ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಗೌರವಾಧ್ಯಕ್ಷ ಕೆ.ಸದಾನಂದ ಹೆಗ್ಡೆ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.