ಅ.2ರಂದು ಉಡುಪಿ ಜಿಲ್ಲಾಡಳಿತದಿಂದ ಗಾಂಧಿ ಜಯಂತಿ

Update: 2024-10-01 14:01 GMT

ಉಡುಪಿ, ಅ.1: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಉಡುಪಿ ಹಾಗೂ ಉಡುಪಿಯ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ 155ನೇ ಗಾಂಧಿ ಜಯಂತಿ ಕಾರ್ಯಕ್ರಮ ನಾಳೆ ಅ.2ರಂದು ಬೆಳಗ್ಗೆ 8:30ಕ್ಕೆ ನಗರದ ಅಜ್ಜರಕಾಡಿನನ ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನುಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಪೌರಾಯುಕ್ತ ರಾಯಪ್ಪ ಮತ್ತಿತರರು ಭಾಗವಹಿಸಲಿದ್ದು, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಪ್ರಸಾದ್ ರಾವ್ ಎಂ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಇದಕ್ಕೆ ಮುನ್ನ ನಾಳೆ ಬೆಳಗ್ಗೆ 7  ಗಂಟೆಗೆ ಉಡುಪಿಯ ಹಳೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ, 7:30ಕ್ಕೆ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್‌ಟವರ್‌ನಿಂದ ಅಜ್ಜರಕಾಡಿನ ಪುರಭವನದವರೆಗೆ ಜಾಥಾ ಕಾರ್ಯಕ್ರಮ, 8:30ಕ್ಕೆ ಅಜ್ಜರಕಾಡು ಭುಜಂಗ ಪಾರ್ಕ್‌ನ ಗಾಂಧಿ ಕಟ್ಟೆಯಲ್ಲಿ ಇರುವ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಹಾಗೂ 9:00ಕ್ಕೆ ಅಜ್ಜರಕಾಡಿನ ಪುರಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News