ಅ.20ರಂದು ಉದ್ಯೋಗ ಮೇಳ

Update: 2024-10-15 14:15 GMT

ಉಡುಪಿ, ಅ.15: ಭಾರತ ಸರಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (ಎನ್‌ಐಇಎಲ್‌ಐಟಿ)ಯು ಕೇಂದ್ರ ಸರಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಶನಲ್ ಕೆರಿಯರ್ ಸರ್ವಿಸ್ (ಎನ್‌ಸಿಎಸ್), ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ರಾಜಾಜಿನಗರದ ಕೆ.ಎಲ್.ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಅ.20ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಇದರಲ್ಲಿ ಎಲ್ಲಾ ರೀತಿಯ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿ ಗಳಿಗೆ ರಾಜ್ಯದ ಎಲ್ಲಾ ವಲಯಗಳಿಂದ 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಧ್ಯಮ/ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆ ಇದೆ. ರಾಜ್ಯದ ಯುವ ಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲ ವಾಗುವ ದೃಷ್ಟಿಯಿಂದ ಉದ್ಯೋಗಾಕಾಂಕ್ಷಿ ಹಾಗೂ ಉದ್ಯೋಗದಾತರು -&https://jobfair.calicut.nielit.in/&-ಗೆ ಭೇಟಿ ನೀಡಿ ತಮ್ಮ ಸ್ವವಿವರ ಗಳನ್ನು ಉಚಿತವಾಗಿ ನೋಂದಣಿ ಮಾಡಿಕೊಂಡು, ಮೇಳದಲ್ಲಿ ಭಾಗವಹಿಸಿ, ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆಯುವಂತೆ, ಉಡುಪಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News