ಅ.21 ರಂದು ಉಪಚುನಾವಣೆ: ಮದ್ಯ ಮಾರಾಟ ನಿಷೇಧ

Update: 2024-10-14 14:30 GMT

ಉಡುಪಿ, ಅ.14: ಚುನಾವಣಾ ಆಯೋಗವು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಘೋಷಿಸಿದ್ದು, ಜಿಲ್ಲೆಯಲ್ಲಿ ಅ.21 ರಂದು ಮತದಾನ ಹಾಗೂ ಅ.24ರಂದು ಮತ ಎಣಿಕೆ ನಿಗದಿಯಾಗಿದೆ.

ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯತ ವಾತಾವ ರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತದಾನ ಪ್ರಾರಂಭವಾಗುವುದಕ್ಕೆ 48 ಗಂಟೆ ಮುಂಚಿತವಾಗಿ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಅಡಿ ಪ್ರದತ್ರವಾದ ಅಧಿಕಾರ ವನ್ನು ಚಲಾಯಿಸಿ ಅ.19ರ ಸಂಜೆ 4 ಗಂಟೆಯಿಂದ ಅ.21ರ ಸಂಜೆ 4 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಇದರಂತೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಹೊಟೇಲುಗಳಲ್ಲಿ, ಕಬ್‌ಗಳಲ್ಲಿ ಹಾಗೂ ಶೇಂದಿ ಅಂಗಡಿ ಗಳಲ್ಲಿ ಮದ್ಯ ಮಾರಾಟ/ಸರಬರಾಜು ಮಾಡುವು ದನ್ನು ಕೂಡಾ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News