ಡಿ.24: ರಾಷ್ಟ್ರೀಯ ಗ್ರಾಹಕ ದಿನಾಚರಣೆ
ಉಡುಪಿ, ಡಿ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆ ಕಾರ್ಯಕ್ರಮ ಡಿ.24ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ನಗರದ ಎಸ್.ಎಮ್.ಎಸ್.ಪಿ ಸಂಸ್ಕೃತ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿ ಸಲಿದ್ದು, ಎಸ್.ಎಮ್.ಎಸ್.ಪಿ ಸಂಸ್ಕೃತ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಸತ್ಯನಾರಾಯಣ ಪಿ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಯೋಗೀಶ್, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷ ಸುನಿಲ ತಿ. ಮಾಸರಡ್ಡಿ, ತೆಂಕಪೇಟೆ ವಾರ್ಡ್‌ನ ನಗರಸಭೆ ಸದಸ್ಯೆ ಮಾನಸ ಸಿ.ಪೈ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಹಾಗೂ ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ ಎ.ಪಿ.ಕೊಡಂಚ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.