ಡಿ.24ರಂದು ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ
Update: 2024-12-23 13:58 GMT
ಉಡುಪಿ, ಡಿ.23: ಭಾರತದ ಸಂವಿಧಾನಕ್ಕೆ 75 ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಕಳೆದ ಪಾರ್ಲಿಮೆಂಟ್ ಅಧಿವೇಶನದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಮತ್ತು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ಆಗ್ರಹಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಡಿ.24ರಂದು ಸಂಜೆ 4.30ಕ್ಕೆ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.