ಡಿ.29: ಉಡುಪಿ ಧರ್ಮಪ್ರಾಂತ್ಯದಲ್ಲಿ ಜುಬಿಲಿ 2025 ವರ್ಷಕ್ಕೆ ಚಾಲನೆ
Update: 2024-12-27 12:41 GMT
ಉಡುಪಿ, ಡಿ.27: 2025 ವರ್ಷವನ್ನು ಏಸು ಕ್ರಿಸ್ತರು ಹುಟ್ಟಿ 2025 ವರ್ಷ ಗಳಾಗಿದ್ದು ಅದನ್ನು ಜುಬಿಲಿ ವರ್ಷವನ್ನಾಗಿ ಆಚರಿಸಲಾಗುತ್ತಿದ್ದು ಉಡುಪಿ ಧರ್ಮಪ್ರಾಂತ್ಯದಲ್ಲಿ ಡಿ.29ರಂದು ಉಡುಪಿ ಧರ್ಮಾಧ್ಯಕ್ಷ ಅತಿ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಚಾಲನೆ ನೀಡಲಿದ್ದಾರೆ.
ಜುಬಿಲಿ ವರ್ಷಕ್ಕೆ ಡಿ.24ರಂದು ವ್ಯಾಟಿಕನ್‌ನಲ್ಲಿ ಪೋಪ್ ಜಗದ್ಗುರು ಬೆನಡಿಕ್ಟ್ ಸೈಂಟ್ ಪೀಟರ್ ಬೆಸಿಲಿಕಾದ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಉದ್ಘಾಟನೆ ಮಾಡಿದ್ದಾರೆ. ಅದೇ ರೀತಿ ಉಡುಪಿ ಧರ್ಮಪ್ರಾಂತ್ಯದಲ್ಲಿ ಬೆಳಿಗ್ಗೆ 8ಗಂಟೆಗೆ ಬಲಿಪೂಜೆಯೊಂದಿಗೆ ಜುಬಿಲಿ ವರ್ಷಕ್ಕೆ ಚಾಲನೆ ನೀಡಲಾಗುವುದು. ಬಲಿಪೂಜೆಯಲ್ಲಿ ಧರ್ಮಾಧ್ಯಕ್ಷರೊಂದಿಗೆ ಹಲವಾರು ಧರ್ಮಗುರುಗಳೊಂದಿಗೆ ಭಕ್ತವೃಂದ ಭಾಗವಹಿಸಲಿದ್ದಾರೆ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾ ಧಿಕಾರಿ ವಂ.ಡೆನಿಸ್ ಡೆಸಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.