‘ಸ್ವಚ್ಛ ಸರ್ವೇಕ್ಷಣ ಗ್ರಾಮೀಣ’ ಸಮೀಕ್ಷೆಯಲ್ಲಿ 3 ಗ್ರಾಪಂಗಳು ಆಯ್ಕೆ
Update: 2023-09-29 15:50 GMT
ಉಡುಪಿ, ಸೆ.29: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲ ಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ಸಮೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಮೂರು ಗ್ರಾಪಂಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು, ಉಡುಪಿ ತಾಲೂಕಿನ ಕೆಮ್ಮಣ್ಣು ಹಾಗೂ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಪಂಗಳು ಸೇರಿದಂತೆ ರಾಜ್ಯದ 15 ಗ್ರಾಪಂಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಅ.2ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಸ್ವಚ್ಛ ಸರ್ವೆಕ್ಷಣ ಗ್ರಾಮೀಣ-2023ರಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಗ್ರಾಪಂಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.