ಸೆ.30: ರೂಬಿಕ್ಸ್‌ಕ್ಯೂಬ್ ಗಿನ್ನಿಸ್ ರೆಕಾರ್ಡ್ ಪ್ರಮಾಣಪತ್ರ ಪ್ರದಾನ

Update: 2024-09-29 12:59 GMT

ಕುಂದಾಪುರ, ಸೆ.29: ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯ ರಜತ ಮಹೋತ್ಸವದ ಸಂದರ್ಭ ವಿದ್ಯಾರ್ಥಿಗಳು ರೂಬಿಕ್ಸ್ ಕ್ಯೂಬ್ ಮೂಲಕ ಎರಡು ಗಿನ್ನಿಸ್ ವಿಶ್ವ ದಾಖಲೆಗಳನ್ನು ಮಾಡಿದ್ದು, ಅದರ ಪ್ರಮಾಣ ಪತ್ರ ಪ್ರದಾನ ಕಾರ್ಯ ಕ್ರಮ ಸೆ.30 ಮತ್ತು ಅ.1ರಂದು ನಡೆಯಲಿದೆ ಎಂದು ಸಂಸ್ಥೆಯ ಉಪ ಪ್ರಾಂಶುಪಾಲ ರಾಮ ದೇವಾಡಿಗ ತಿಳಿಸಿದ್ದಾರೆ.

ಕುಂದಾಪುರದಲ್ಲಿ ಶನಿವಾರ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.30ರಂದು ಶಾಲೆಯ ಡಾ.ಎಚ್. ಶಾಂತಾರಾಮ ರಂಗ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಎಸ್.ಎಸ್ ಟ್ರಸ್ಟ್ ಅಧ್ಯಕ್ಷ ಎಚ್.ಗಣೇಶ ಕಾಮತ್ ವಹಿಸಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ ಕಾರ್ಣಿಕ್, ಕೊಲ್ಲೂರು ದೇವಸ್ಥಾನದ ಮಾಜಿ ಟ್ರಸ್ಟಿ ಜಯಾನಂದ ಹೋಬಳಿ ದಾರ್ ಭಾಗವಹಿಸಲಿದ್ದಾರೆ ಎಂದರು.

ಅ.1ರಂದು ಮಧ್ಯಾಹ್ನ 1.45ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು ರಿಜಿಸ್ಟ್ರಾರ್ ಡಾ.ಎನ್.ಪಿ.ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಮಕ್ಕಳಲ್ಲಿ ಅರಿವಿನ ಕೌಶಲ್ಯ, ಸಮಸ್ಯೆ-ಪರಿಹರಿಸುವ ಸಾಮರ್ಥ್ಯ, ಕಲಿಕೆಯಲ್ಲಿ ಆಸಕ್ತಿಯನ್ನು ಬೆಳೆಸುವ ಗುರಿಯಿಂದ ಗಿನ್ನೆಸ್ ವಿಶ್ವ ದಾಖಲೆಗಳಲ್ಲಿ ಬಳಸಲಾಗುವ ಎಲ್ಲಾ ರೂಬಿಕ್ಸ್ ಕ್ಯೂಬ್ ಗಳನ್ನು ಹತ್ತಿರದ ಸರಕಾರಿ ಶಾಲೆಯ ವಿದ್ಯಾರ್ಥಿ ಗಳಿಗೆ ವಿತರಿಸಲಾಗಿದೆ ಎಂದವರು ಮಾಹಿತಿ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಸಿದ್ಧಿವಿನಾಯಕ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸುಜಾತ ಸದಾನಂದ, ಸಹಶಿಕ್ಷಕಿ ಲತಾ ದೇವಾಡಿಗ, ಮಾದೇವ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News