ನ.30: ಲಕ್ಷ್ಮೀ ಹೆಬ್ಬಾಳ್ಕರ್, ದಿನೇಶ್ ಗುಂಡೂರಾವ್ ಉಡುಪಿ ಜಿಲ್ಲೆಯಲ್ಲಿ ಪ್ರವಾಸ

Update: 2024-11-29 15:32 GMT

ಉಡುಪಿ, ನ.29: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ನ.30 ಶನಿವಾರದಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನಾಳೆ ಬೆಳಗ್ಗೆ 9:30ಕ್ಕೆ ಉಡುಪಿ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡುವ ಸಚಿವೆ, 10:30ಕ್ಕೆ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆಯುವ ಕರ್ನಾಟಕ ಅಭಿವೃದ್ಧಿ ಕಾರ್ಯ ಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಅಪರಾಹ್ನ 3:00 ಗಂಟೆಗೆ ನಗರದ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಸಚಿವೆ ಭಾಗವಹಿಸಲಿದ್ದಾರೆ.

ದಿನೇಶ್ ಗುಂಡೂರಾವ್: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನಾಳೆ ಅಪರಾಹ್ನ 3 ಗಂಟೆಗೆ ಉಡುಪಿಗೆ ಆಗಮಿಸ ಲಿದ್ದು, 3:45ಕ್ಕೆ ಕುಂದಾಪುರದ ಕೋಡಿಯ ಬ್ಯಾರೀಸ್ ನಾಲೆಜ್ಡ್ ಕ್ಯಾಂಪಸ್‌ನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4:30ಕ್ಕೆ ಅಲ್ಲಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News