30 ವರ್ಷಗಳ ಹಿಂದೆ ವ್ಯಕ್ತಿ ನಾಪತ್ತೆ: ದೂರು ದಾಖಲು
Update: 2025-01-14 15:36 GMT
ಕಾರ್ಕಳ, ಜ.14: ಪಳ್ಳಿ ಗ್ರಾಮದ ಬಂಡಸಾಲೆ ನಿವಾಸಿ ಗೋಪಾಲಕೃಷ್ಣ (68) ಎಂಬವರು ಸುಮಾರು 30 ವರ್ಷಗಳ ಹಿಂದೆ ತನ್ನ ಮನೆಯಿಂದ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಮನೆಯವರಿಗೆ ಗೋಪಾಲ ಕೃಷ್ಣ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಬೇಕೆಂಬ ತಿಳುವಳಿಕೆ ಇಲ್ಲದೇ ಇರುವುದರಿಂದ ಇದೀಗ ಠಾಣೆಗೆ ಬಂದು ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.