ಎ.30: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಉಡುಪಿ, ಎ.26: ಉಡುಪಿ ಜಿಲ್ಲಾ ಬಸವ ಸಮಿತಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ 2022-23, 2023-24 ಮತ್ತು 2024-25ನೇ ಶೈಕ್ಷಣಿಕ ವರ್ಷಗಳಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಗಳಿಸಿದ ಜಿಲ್ಲೆಯ ವೀರಶೈವ ಲಿಂಗಾಯತ ಸಮಾಜದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಸಮಾರಂಭ ಎ.30ರಂದು ನಡೆಯಲಿದೆ.
ಜಿಲ್ಲೆಯಲ್ಲಿ ವಾಸಿಸುತ್ತಿರುವ ಅರ್ಹ ವೀರಶೈವ ಲಿಂಗಾಯತ ಸಮಾಜದ ಮಕ್ಕಳು ತಮ್ಮ ಎಸೆಸೆಲ್ಸಿ ಮತ್ತು ಪಿಯುಸಿ ಅಂಕಪಟ್ಟಿಗಳನ್ನು ಹಾಗೂ ಆಧಾರ ಕಾರ್ಡ್ ಪ್ರತಿಗಳನ್ನು ನಾಗರಾಜ್ (ಮೊಬೈಲ್: 94482 61478) ಹಾಗೂ ಸಚಿನ್ (9482902440) ಇವರಿಗೆ ಸಲ್ಲಿಸಬಹುದು.
ಎ.30ರಂದು ಜಿಲ್ಲೆಯಲ್ಲಿ ನಡೆಯಲಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ. ಸಮುದಾಯದ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಜಿಲ್ಲಾ ಬಸವ ಸಮಿತಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.