ಅ.31: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲೆಯಲ್ಲಿ ಪ್ರವಾಸ
Update: 2024-11-10 17:30 GMT
ಉಡುಪಿ, ಅ.30: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಅ.31 ಹಾಗೂ ನವೆಂಬರ್ 1ರಂದು ಜಿಲ್ಲೆ ಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅ.31ರಂದು ಅಪರಾಹ್ನ 1:30ಕ್ಕೆ ಉಡುಪಿಗೆ ಆಗಮಿಸಿ, ನಗರದ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿರುವ ಸಚಿವರು, ನ.1ರಂದು ಬೆಳಗ್ಗೆ 7:15ರಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.