ಕೋಟ್ಪಾ ಕಾಯ್ದೆಯಡಿ 36 ಪ್ರಕರಣ ದಾಖಲು

Update: 2023-07-20 14:56 GMT

ಉಡುಪಿ, ಜು.20: ಉಡುಪಿ ತಾಲೂಕಿನಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಬುಧವಾರ ಆವರ್ಸೆ ಮತ್ತು ಮಂದಾರ್ತಿ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 36 ಪ್ರಕರಣ ದಾಖಲಿಸಿ, 5900 ರೂ. ದಂಡ ವಸೂಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಶಿಕ್ಷಣ ಸಂಯೋಜಕ ಪ್ರಕಾಶ್ ಬಿ, ಬ್ರಹ್ಮಾವರ ಪೊಲೀಸ್ ಠಾಣೆಯ ಎಎಸ್‌ಐ ಬಿ.ಕೆ ಶಾಂತಾರಾಜ್, ಎನ್‌ಟಿಸಿಪಿ ವಿಭಾಗದ ಸಾಮಾಜಿಕ ಕಾರ್ಯಕರ್ತೆ ಶೈಲಾ ಶ್ಯಾಮನೂರ್ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News