ಕೇಂದ್ರದಿಂದ ಗ್ರಾಮೀಣ ವಸತಿ ಯೋಜನೆಯ 400 ಕೋಟಿ ರೂ. ಬಿಡುಗಡೆ: ಸಂಸದ ಕೋಟ

Update: 2024-09-13 14:03 GMT

ಉಡುಪಿ, ಸೆ.13: ಕೇಂದ್ರ ಸರಕಾರ, ಕರ್ನಾಟಕ ರಾಜ್ಯಕ್ಕೆ ಹಿಂದಿನ ವರ್ಷಗಳ ವಸತಿ ಯೋಜನೆಯ ಅನುಷ್ಠಾನಕ್ಕಾಗಿ ಗ್ರಾಮೀಣ ವಸತಿ ಯೋಜನೆಗೆ 400 ಕೋಟಿ ರೂ. ಹಾಗೂ ನಗರ ವಸತಿ ಯೋಜನೆಗೆ 75 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಮ್ಮ ಕಚೇರಿಯಲ್ಲಿ ನಡೆಸಿದ ಉಡುಪಿ ಜಿಲ್ಲೆಯ ನಗರ ಸ್ಥಳೀಯಾ ಡಳಿತದ ಪುರಸಭೆ, ಪಟ್ಟಣ ಪಂಚಾಯತ್ ಮತ್ತು ನಗರಸಭೆ ಅಧಿಕಾರಿಗಳ ಸಭೆಯಲ್ಲಿ ಅವರು ಈ ವಿಷಯ ಪ್ರಕಟಿಸಿದರು.

ನಗರಾಡಳಿತ ಸಂಸ್ಥೆಗಳ ವಾಜಪೇಯಿ ವಸತಿ ಯೋಜನೆ ಮತ್ತು ಅಂಬೇಡ್ಕರ್ ವಸತಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಕೋಟ, ಸಾದ್ಯವಾದಷ್ಟು ಬೇಗ ವಸತಿ ಯೋಜನೆಯಲ್ಲಿ ಪ್ರಗತಿಯನ್ನು ಸಾಧಿಸಿ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಲು ಸೂಚಿಸಿದರು.

ಉಡುಪಿ ಜಿಲ್ಲೆಯಲ್ಲಿರುವ ಉಡುಪಿ ನಗರಸಭೆ, ಕುಂದಾಪುರ ಪುರಸಭೆ, ಕಾರ್ಕಳ ಪುರಸಭೆ, ಬೈಂದೂರು ಪಟ್ಟಣ ಪಂಚಾಯತ್, ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಮಾಹಿತಿ ಗಳನ್ನು ಪಡೆದ ಅವರು ಈವರೆಗೆ ಶೇ.80ರಷ್ಟು ಮಾತ್ರ ಬಡವರ ವಸತಿ ಯೋಜನೆಯು ಅನುಷ್ಠಾನವಾಗಿದ್ದು, ಉಳಿಕೆ ಮನೆಗಳ ಪ್ರಗತಿಯನ್ನು ಕೂಡಲೆ ಪರಿಶೀಲಿಸಿ, ಪೂರ್ಣ ಪ್ರಮಾಣದಲ್ಲಿ ಬಡವರ ವಸತಿ ಯೋಜನೆ ಯನ್ನು ಅನುಷ್ಠಾನ ಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಿಎಂ ಸ್ವ-ನಿಧಿ ಯೋಜನೆಯ ಅನುಷ್ಠಾನಕ್ಕೆ ಸೂಚನೆ

ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಬೀದಿ ವ್ಯಾಪಾರಿಗಳು ಮತ್ತು ಸಣ್ಣ ಪುಟ್ಟ ವ್ಯಾಪಾರಿಗಳನ್ನು ಗರಿಷ್ಠ ಪ್ರಮಾಣ ದಲ್ಲಿ ಪಿ.ಎಂ ಸ್ವ-ನಿಧಿ ಯೋಜನೆಯ ವ್ಯಾಪ್ತಿಗೆ ತರುವಂತೆ ಅವರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಈ ಬಗ್ಗೆ ಕೂಡಲೇ ಅರ್ಜಿ ಅಹ್ವಾನಿಸಿ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಒದಗಿಸಲು ಶಿಫಾರಸ್ಸು ಮಾಡು ವಂತೆ ನಗರಾಡಳಿತ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೇ, ಅಕ್ಟೋಬರ್ ಮೊದಲ ವಾರ ದೊಳಗೆ ಸ್ವ-ನಿಧಿ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಿ ಫಲಾನುಭವಿಗಳು ಯೋಜನೆಯ ಉಪಯೋಗ ಪಡೆಯು ವಂತೆ ಕ್ರಮತೆಗೆದುಕೊಳ್ಳಬೇಕೆಂದು ಸುಚಿಸಿದರು.

ಸಭೆಯಲ್ಲಿ ಉಡುಪಿ ನಗರಸಭೆ, ಕಾಪು ಪುರಸಬೆ, ಕಾರ್ಕಳ ಪುರಸಭೆ, ಕುಂದಾಪುರ ಪುರಸಭೆ, ಬೈಂದೂರು ಪಟ್ಟಣ ಪಂಚಾಯತ್ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗಳು, ವಸತಿ ಯೋಜನೆಯ ನೋಡಲ್ ಅಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರವೀಂದ್ರ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News