ಡಿ.5ರ ಸ್ವಾಭಿಮಾನಿ ಸಮಾವೇಶ ಯಶಸ್ಸಿಗೆ ಕರೆ
ಉಡುಪಿ, ಡಿ.4: ಕಾಂಗ್ರೆಸ್ ಪಕ್ಷ ಮತ್ತು ಹಿಂದುಳಿದ ವರ್ಗಗಳ ಒಕ್ಕೂಟದ ಆಶಯದಲ್ಲಿ ಡಿ.5ರಂದು ಹಾಸನದಲ್ಲಿ ಆಯೋಜಿಸಲಾಗಿರುವ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶವನ್ನು ಯಶಸ್ವಿಗೊಳಿಸಂತೆ ಜಿಲ್ಲಾ ಕಾಂಗ್ರೆಸ್ ಕರೆ ನೀಡಿದೆ.
ಈ ಸಮಾವೇಶ ಗುಣಾತ್ಮಕ ನಾಯಕತ್ವವನ್ನು ಬಲಪಡಿಸುವ ಸಮಾವೇಶ ವಾಗಿದ್ದು, 45 ವರ್ಷಗಳ ಕಾಲ ರಾಷ್ಟ್ರ ರಾಜಕಾರಣದಲ್ಲಿ ನಿಷ್ಕಳಂಕ ಹಾಗೂ ನೈತಿಕತೆಯ ಸಾಕ್ಷಿ ಪ್ರಜ್ಞೆಯ ನಾಯಕರಾಗಿ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಬಡವರಿಗಾಗಿ ರೂಪಿ ಸಿದ ಬಹು ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ರೂವಾರಿಗಳಾಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಅಭಿಮಾನಿಗಳು, ಕಾರ್ಯಕರ್ತರು ಮುಖಂಡರು ಹಾಗೂ ಜಿಲ್ಲೆಯ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜೊತೆಗೆ ತಾಲೂಕು ಮತ್ತು ಜಿಲ್ಲಾಮಟ್ಟದ ಗ್ಯಾರಂಟಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ.