ಎ.5ರಂದು ಡಾ.ಬಾಬು ಜಗಜೀವನರಾಮ್ ಜನ್ಮದಿನಾಚರಣೆ
ಉಡುಪಿ, ಎ.3: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಹಾಗೂ ಪ.ಜಾತಿ, ಪ.ಪಂಗಡಗಳ ಸಂಘಟನೆಗಳು ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಎ.5ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿ ದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು ಹಾಗೂ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮತ್ತಿತರು ಭಾಗವಹಿಸಲಿದ್ದಾರೆ.
ಅಜ್ಜರಕಾಡು ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಡಾ.ನಿಕೇತನ ಬಾಬು ಜಗಜೀವನ್‌ರಾಮ್ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.